ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬಂದ್ಗೆ ಕರೆ

Lingaraj Badiger
Updated On : 20 Feb 2013, 11:30 am

ರಾಯಚೂರು: ದೇಶಾದ್ಯಂತ ಫೆ.20 ಮತ್ತು 21ರಂದು ಕಾರ್ಮಿಕ ಸಂಘಟನೆಗಳು ನಡೆಸಲಿರುವ ಮುಷ್ಕರದ ಹಿನ್ನೆಲೆಯಲ್ಲಿ ಟಿಯುಸಿಐ ರಾಯಚೂರು ಜಿಲ್ಲಾ ಬಂದ್ಗೆ ಕರೆ ನೀಡಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ್ ಮತ್ತಿತರರು, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ತಡೆ, ಸಾರ್ವಜನಿಕ ವಲಯಗಳಲ್ಲಿನ ಸರ್ಕಾರಿ ಬಂಡವಾಳ ಹಿಂತೆಗೆತ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಮುಷ್ಕರದ ಸಂದರ್ಭ ಜಿಲ್ಲಾ ಬಂದ್ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.  
ವಿಮಾ ನೌಕರರ ಬೆಂಬಲ
ರಾಯಚೂರು: ದೇಶಾದ್ಯಂತ ಕಾರ್ಮಿಕರು ಫೆ.20 ಮತ್ತು 21ರಂದು ನಡೆಸಲಿರುವ ಸಾರ್ವತ್ರಿಕ ಮುಷ್ಕರಕ್ಕೆ ವಿಮಾ ನೌಕರರ ಸಂಘ ಬೆಂಬಲಿಸಿದೆ.ಈ ಕುರಿತು ಪ್ರಕಟಣೆ ನೀಡಿರುವ ಸಂಘದ ರಾಯಚೂರು ವಿಭಾಗೀಯ ಪ್ರಧಾನ ಕಾರ್ಯದರ್ಶಿ ಎಂ.ರವಿ, ಎರಡು ದಿನಗಳ ಮುಷ್ಕರದ ಸಂದರ್ಭ ರಾಯಚೂರು ವಿಭಾಗದ ಎಲ್ಐಸಿಯ ಎಲ್ಲ 17 ಶಾಖೆಗಳ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ವಿಮಾ ಕಚೇರಿಯ ಎಲ್ಲ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ವಿವಿಧ ಸಂಘಟನೆಗಳು
ರಾಯಚೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಹಾಗೂ ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹಿಸಿ ಫೆ.20 ಮತ್ತು 21ರಂದು ಕರೆ ನೀಡಿರುವ ಸಾರ್ವತ್ರಿಕ ಕಾರ್ಮಿಕರ ಮುಷ್ಕರಕ್ಕೆ ವಿವಿಧ ಸಂಘಟನೆಗಳು ಬೆಂಬಲಿಸಿವೆ. ಈ ಕುರಿತು ಎಐಡಿಎಸ್ಒ, ಎಐಎಂಎಸ್ಎಸ್, ಎಐಡಿವೈಒ ಸಂಘಟನೆಯ ಪ್ರಮುಖರಾದ ಮಹೇಶ್ ಚೀಕಲಪರ್ವಿ, ಚೇತನಾ ಬನಾರೆ, ಚನ್ನಬಸವ ಜಾನೇಕಲ್ ಪ್ರಕಟಣೆ ನೀಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಫೆ.20, 21ರಂದು ನಡೆಯುವ ಮುಷ್ಕರದಲ್ಲಿ ಎಲ್ಲರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
ಶಾಲಾ, ಕಾಲೇಜು ಬಂದ್
ಲಿಂಗಸ್ಗೂರು: ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯ ರಾಜ್ಯ ಸಮಿತಿ ಕರೆ ಮೇರೆಗೆ ವಿದೇಶಿ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ, ಡೊನೇಷನ್ ಹಾವಳಿ, ವಿದ್ಯಾರ್ಥಿನಿಯರ ಮೇಲೆ ನಡೆಯುವ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಫೆ.20 ಮತ್ತು 22ರಂದು ಎಸ್ಎಫ್ಐ ಸಂಘಟನೆ ವತಿಯಿಂದ ಶಾಲಾ- ಕಾಲೇಜುಗಳಿಗೆ ಬಂದ್ ಕರೆ ನೀಡಲಾಗಿದೆ ಎಂದು ಸಂಘಟನೆಯ ತಾಲೂಕು ಉಪಾಧ್ಯಕ್ಷ ರಮೇಶ ವೀರಾಪುರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments