ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಕ್ಕಳ ಹಕ್ಕುಗಳ ಕಡ್ಡಾಯ ರಚನೆಗೆ ಮಕ್ಕಳ ಒತ್ತಾಯ

Mainashree
Updated On : 23 Feb 2013, 10:54 am

ರಾಯಚೂರು: ಶಾಲೆಯ ಎಲ್ಲ ನಿರ್ದೇಶಕರುಗಳು ಪ್ರತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳನ್ನು ಕಡ್ಡಾಯವಾಗಿ ರಚಿಸಿದರೆ ಮಕ್ಕಳ ಹಕ್ಕುಗಳು, ಸಮಾಜದಲ್ಲಿನ ವಿವಿಧ ಇಲಾಖೆಗಳ ಪರಿಚಯ, ಸಮಾಜಿಕ ಸಮಸ್ಯೆಗಳ ಕುರಿತು ಅರಿವು ಮೂಡಲಿದೆ ಎಂದು ಶಾಲಾ ಮಕ್ಕಳು ಒತ್ತಾಯಿಸಿದರು.
ಇತ್ತೀಚೆಗೆ ದೇವದುರ್ಗ ತಾಲೂಕಿನ ಮಲ್ಲೇದೇವರಗುಡ್ಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸರ್ವ ಶಿಕ್ಷಣ ಅಭಿಯಾನ ಮತ್ತು ಯುನಿಸೆಫ್ ವತಿಯಿಂದ ಹಮ್ಮಿಕೊಂಡಿದ್ದ 24 ಶಾಲೆಗಳ ಮಕ್ಕಳ ಹಕ್ಕುಗಳ ಕ್ಲಬ್‌ನ ನಿರ್ದೇಶಕರುಗಳ ಸಮಾಲೋಚನಾ ಸಭೆಯಲ್ಲಿ ವಿವಿಧ ಶಾಲಾ ಮಕ್ಕಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ರಾಪಂ ಅಧ್ಯಕ್ಷೆ ಸಾಬಮ್ಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಪಂ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಅಗತ್ಯವಿರುವ ಎಲ್ಲ ಸೌಲತ್ತುಗಳನ್ನು ಒದಗಿಸುವುದಾಗಿ ತಿಳಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಪಾಂಡುರಂಗ ಮಾತನಾಡಿ, ಸರ್ಕಾರದ ಸರ್ವ ಶಿಕ್ಷಣ ಅಭಿಯಾನದ ಕನಸಾದ ಮಕ್ಕಳ ಹಕ್ಕುಗಳ ಕ್ಲಬ್ ಆರಂಭದಿಂದ ಶಾಲೆಯನ್ನು ಮಕ್ಕಳ ಸ್ನೇಹಿಯನ್ನಾಗಿ ಮಾಡಿ ಮಕ್ಕಳು ಶಾಲೆ ಬಿಡುವುದು, ಬಾಲಕಾರ್ಮಿಕತೆ, ಬಾಲ್ಯವಿವಾಹವನ್ನು ತಪ್ಪಿಸಿ ಮಕ್ಕಳ ಸಮಗ್ರ ಅಭಿವೃದ್ಧಿಗೆ ಸಹಕಾರಿ ಎಂದರು.
ಸಮಾಲೋಚನಾ ಸಭೆಯಲ್ಲಿ ವಿವಿಧ ಶಾಲಾ ಮಕ್ಕಳು, ಮಕ್ಕಳ ಹಕ್ಕುಗಳ ಕ್ಲಬ್ ನಿರ್ದೇಶಕರುಗಳು ಆಯಾ ಶಾಲೆಯಲ್ಲಿ ಕಳೆದ 8 ತಿಂಗಳಿಂದ ಜರುಗಿದ ಕಾರ್ಯಕ್ರಮಗಳು ಹಾಗೂ ಅದರ ಪರಿಣಾಮಗಳನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ಯುನಿಸೆಫ್ ಸಂಯೋಜಕ ಸುದರ್ಶನ, ಸಮುದಾಯ ಸಂಘಟಕ ಸಿದ್ಧಲಿಂಗಪ್ಪ, ಪ್ರೇಮನಾಥ ಸೇರಿದಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಗುರುಗಳು, ಶಿಕ್ಷಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement