ಮಹಿಳೆಯರಿಗೆ ಸಮಾನ ಗೌರವ ನೀಡಿ: ಶಶಿಧರ
ಸಿಂಧನೂರು: ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಗೌರವ ನೀಡಬೇಕಿರುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆರ್.ವೈ. ಶಶಿಧರ ಹೇಳಿದರು. ಸ್ಥಳೀಯ ನ್ಯಾಯಾಲಯದ ವಕೀಲರ ಸಭಾಂಗಣದಲ್ಲಿ ಮಹಿಳೆ ಮತ್ತು ರಕ್ಷಣೆ ಕುರಿತು ಹಮ್ಮಿಕೊಂಡಿದ್ದ ಕಾನೂನು ಅರಿವು- ನೆರವು ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾನೂನನ್ನು ಪ್ರತಿಯೊಬ್ಬರು ಚಾಚೂ ತಪ್ಪದೇ ಪಾಲಿಸಬೇಕು. ಮಹಿಳೆಯರು ಸಮಾಜದಲ್ಲಿ ನೆಮ್ಮದಿಯಿಂದ ಬದಕು ಸಾಗಿಸುವಂತ ವಾತಾವರಣ ನಿರ್ಮಾಣವಾಗಬೇಕು. ಉನ್ನತ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶ ಪಿ.ಜೆ. ಸೋಮಶೇಖರ, ವಕೀಲರ ಸಂಘದ ಅಧ್ಯಕ್ಷ ಕೆ.ಭೀಮನಗೌಡ ವಕೀಲರು, ಸರ್ಕಾರಿ ಸಹಾಯಕ ಅಭಿಯೋಜಕ ಶೇಖರಪ್ಪ ಶಾಲಿಗನೂರು, ಕಾರ್ಯದರ್ಶಿ ಖಾಜಿಮಲಿಕ್ ವಕೀಲರು ಉಪಸ್ಥಿತರಿದ್ದರು. ಭೀಮರಾಯ ಎಚ್. ವಕೀಲರು ನಿರೂಪಿಸಿದರು.