ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ
ಮಸ್ಕಿ: ಪಟ್ಟಣದ ಮಲ್ಲಿಕಾರ್ಜುನ ದೇವರ ಮಹಾರಥೋತ್ಸವ ಸೋಮವಾರ ಸಂಜೆ ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಗ್ಗೆ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಜೆ ಗಚ್ಚಿನಮಠದ ರುದ್ರಮುನಿ ದೇವರು ರಥಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ಭಕ್ತರ ಹರ್ಷೋದ್ಘಾರಗಳೊಂದಿಗೆ ತೇರು ಬಜಾರ್ದಿಂದ ದೈವದ ಕಟ್ಟೆಯವರೆಗೆ ವಿಜೃಂಭಣೆಯಿಂದ ಜರುಗಿತು. ಸುತ್ತಮುತ್ತಲಿನ ಗ್ರಾಮಗಳ ಮತ್ತು ನೆರೆಯ ರಾಜ್ಯಗಳಾದ ಆಂಧ್ರ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರದಿಂದಲೂ ಭಕ್ತರು ಆಗಮಿಸಿ ಪಾಲ್ಗೊಂಡಿದ್ದರು.