ಟ್ರ್ಯಾಕ್ಟರ್ನಿಂದ ಬಿದ್ದು ಸಾವು
ರಾಯಚೂರು: ಮಾನವಿ ತಾಲೂಕಿನ ಸಿಂಗಡದಿನ್ನಿ ಗ್ರಾಮದ ಬಳಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ನಿಂದ ಬಿದ್ದು ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ.
ಮೃತನನ್ನು ಶಿವಗ್ಯಾನಿ ಎಂದು ಗುರುತಿಸಲಾಗಿದೆ. ಈತ ನದಿಯಿಂದ ಮರಳು ತುಂಬಿಕೊಂಡು ವೇಗವಾಗಿ ರಾತ್ರಿ ವೇಳೆ ಕತ್ತಲಿನಲ್ಲಿ ಸಾಗಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಕೆಳಗೆ ಬಿದ್ದಿದ್ದು, ತೀವ್ರ ಗಾಯಗೊಂಡ ಆತ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮದ್ಯ ವ್ಯಸನಿ ಸಾವು
ರಾಯಚೂರು: ತಾಲೂಕಿನ ಗಾಣಧಾಳ ಗ್ರಾಮದಲ್ಲಿ ಮದ್ಯವ್ಯಸನಿಯೊಬ್ಬ ಅತಿಯಾದ ಮದ್ಯ ಸೇವನೆಯಿಂದ ಮೃತಪಟ್ಟಿದ್ದಾನೆ.
ಮೃತನನ್ನು ಶಿವಮೂರ್ತಿ ಎಂದು ಗುರುತಿಸಲಾಗಿದೆ. ಈತ ಅತೀಯಾದ ಮದ್ಯ ಸೇವಿಸುತ್ತಿದ್ದು, ಮನೆಯಲ್ಲಿ ಬುದ್ಧಿ ಹೇಳಿದರೂ ಕೇಳಿರಲಿಲ್ಲ. ಕೆಲಸದ ನಿಮಿತ್ತ ಗಾಣದಾಳ ಗ್ರಾಮದ ಗೋದಾಮಿನಲ್ಲಿ ಮಲಗಿದ್ದು, ತೀವ್ರ ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಇಡಪನೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವ್ಯಕ್ತಿ ಸಾವು
ರಾಯಚೂರು: ಲಿಂಗಸ್ಗೂರು ತಾಲೂಕಿನ ಹೊನ್ನಳ್ಳಿಯ ಬಳಿ ಆಟೋದಿಂದ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ.
ಮೃತನನ್ನು ಅಮರೇಶ್ ಎಂದು ಗುರುತಿಸಲಾಗಿದೆ. ಈತ ಆಟೋದಲ್ಲಿ ಸಾಗುತ್ತಿದ್ದಾಗ ಗ್ರಾಮದ ರಸ್ತೆಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಲಿಂಗಸ್ಗೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಟಕಾ: ಬಂಧನ
ರಾಯಚೂರು: ಸಿಂಧನೂರು ತಾಲೂಕಿನ ಕೆ.ಹಂಚಿನಾಳ ಕ್ಯಾಂಪಿನಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬಂಧಿತನನ್ನು ತ್ರಿಮೂರ್ತಿ ಎಂದು ಗುರುತಿಸಲಾಗಿದೆ. ಈತ ಮಟಕಾ ಜೂಜಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ 4400 ಜಪ್ತಿ ಮಾಡಿದ್ದಾರೆ.
ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.