ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಆಧ್ಯಾತ್ಮಿಕ ವಿಚಾರದಿಂದ ಯೋಗ್ಯ ವ್ಯಕ್ತಿಗಳಾಗಿ: ಜತ್ತಿ

Rashmi Kasaragodu
Updated On : 28 Feb 2013, 12:03 pm

ರಾಯಚೂರು: ಮಾನಸಿಕ, ದೈಹಿಕ ಮತ್ತು ಆಧ್ಯಾತ್ಮಿಕ ಅಂಶಗಳನ್ನು ಅರಿತರೆ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಲು ಸಾಧ್ಯ. ಸಮಾಜದಲ್ಲಿ ಎಲ್ಲರೂ ಯೋಗ್ಯ ವ್ಯಕ್ತಿಗಳಾಗಿ ರೂಪಗೊಳ್ಳಲು ಪ್ರಯತ್ನಿಸಬೇಕಿದೆ ಎಂದು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಹೇಳಿದರು.
ನಗರದ ರಾಯಚೂರು ಕೃಷಿ ವಿವಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ವಚನಕಾರರು ಎಂಬ ವಿಷಯದ ಕುರಿತು ಮಾತನಾಡಿ, ದಾರ್ಶನಿಕರಿಗೆ ಯಾವುದೇ ರೀತಿಯ ಚೌಕಟ್ಟುಗಳಿಲ್ಲ. ಅವರನ್ನು ಒಂದು ಧರ್ಮಕ್ಕೆ ಅಥವಾ ಜಾತಿಗೆ ಸೀಮಿತಗೊಳಿಸುವುದು ಸರಿಯಾದ ಕ್ರಮವಲ್ಲ. ಬಸವಣ್ಣನವರು ಆಧುನಿಕ ವ್ಯಕ್ತಿತ್ವದ ಅಭಿವೃದ್ಧಿಗಾರರೆಂದು ಬಣ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ವಿ. ಪಾಟೀಲ್ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement