ಗುಲ್ಬರ್ಗ ಪೀಠ ಕಾಯಂ: ಸಿಎಸ್, ಹೈಕೋರ್ಟ್ ರಿಜಿಸ್ಟ್ರಾರ್ಗೆ ನೋಟಿಸ್
ಬೆಂಗಳೂರು: ಗುಲ್ಬರ್ಗ ಹೈಕೋರ್ಟ್ ಸಂಚಾರಿ ಪೀಠವನ್ನು ಕಾಯಂಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಹೈಕೋರ್ಟ್ ರಿಜಿಸ್ಟ್ರಾರ್ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ರೊಡ್ಡವೀರಶೆಟ್ಟಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಶ್ರೀಧರ್ರಾವ್ ಹಾಗೂ ನ್ಯಾ.ಅಬ್ದುಲ್ ನಜೀರ್ ಅವರಿದ್ದ ವಿಭಾಗೀಯ ಪೀಠ, ವಿಚಾರಣೆಯನ್ನು ಮುಂದೂಡಿದೆ. ಗುಲ್ಬರ್ಗ ಪೀಠವನ್ನು ಕಾಯಂಗೊಳಿಸಬೇಕು. ಅಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕೂಡ ವಿಚಾರಣೆಗೆ ಪರಿಗಣಿಸಬೇಕು. ಇದರಿಂದ ಅಲ್ಲಿನ ಜನರು ಬೆಂಗಳೂರಿಗೆ ಪ್ರಯಾಣ ಬೆಳೆಸುವುದು ತಪ್ಪುತ್ತದೆ ಎಂದು ಅರ್ಜಿದಾರರು ಕೋರಿದ್ದಾರೆ.