ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಗೆಲವಿಗೆ ಶ್ರಮಿಸಲು ಬ್ಯಾಗವಾಟ್ ಕರೆ

Rashmi Kasaragodu
Updated On : 1 Mar 2013, 11:04 am

ಸಿಂಧನೂರು: ನಗರಸಭೆ ಚುನಾವಣೆಯಲ್ಲಿ ವಿವಿಧ ವಾರ್ಡ್‌ಗಳಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪರ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಪ್ರಚಾರ ಕೈಗೊಳ್ಳುವ ಮೂಲಕ ಬಹುಮತಕ್ಕಾಗಿ ಶ್ರಮಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ಕರೆ ನೀಡಿದರು.
ನಗರದ ಆದರ್ಶ ಕಾಲೋನಿಯ ಆರ್.ಕೆ.ಟವರ್ಸ್‌ನಲ್ಲಿ ನಡೆದ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪಕ್ಷದಲ್ಲಿ ಒಗ್ಗಟ್ಟನ್ನು ಮೂಡಿಸಿ ಈ ಬಾರಿ ಶತಾಯಗತಾಯ ಸಿಂಧನೂರಿನ ನಗರಸಭೆ ಬಿಜೆಪಿ ತೆಕ್ಕೆಗೆ ಹಾಕಿಕೊಳ್ಳಲು ಪಕ್ಷದ ನಾಯಕ ಶಕ್ತಿಮೀರಿ ಪ್ರಯತ್ನಿಸಬೇಕು. ಅಭ್ಯರ್ಥಿಗಳು ಸ್ಥಳೀಯ ನಾಯಕರ ಮಾರ್ಗದರ್ಶನದಲ್ಲಿ ತಮ್ಮ ವಾರ್ಡ್‌ನ ಮತದಾರರ ಮನಮೊಲಿಸಲು ಮುಂದಾಗಬೇಕೆಂದು ಸಲಹೆ ನೀಡಿದರು. ಮುಖಂಡ ಆರ್. ತಿಮ್ಮಯ್ಯ, ಚುನಾವಣಾ ಸಿದ್ದತೆ ಮತ್ತು ಕ್ಷೇತ್ರದ ಸ್ಥಿತಿಗತಿಯ ಬಗ್ಗೆ ಅಭ್ಯರ್ಥಿಗಳಿಂದ ಮಾಹಿತಿ ಪಡೆದು ಗೆಲುವಿನ ತಂತ್ರಗಳನ್ನು ಹೇಳಿ ಕೊಟ್ಟರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶೇಷಗಿರಿರಾವ್, ತಾಲೂಕ ಅಧ್ಯಕ್ಷ ಅಮರೇಗೌಡ ವಿರುಪಾಪುರ, ನ.ಯೋ.ಪ್ರಾ .ಅಧ್ಯಕ್ಷ ಎನ್.ಶಿವನಗೌಡ ಗೊರೇಬಾಳ, ಉಮೇಶ ಸಜ್ಜನ್, ಈರೇಶ ಇಲ್ಲೂರು ಮತ್ತಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement