ಸಂಸ್ಥೆಗಳಿಂದ ಗುಣಮಟ್ಟದ ಶಿಕ್ಷಣ ಅಗತ್ಯ
ಯಾದಗಿರಿ: ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿ ಮಕ್ಕಳಲ್ಲಿ ಬೆಳೆಸಿದಾಗ ಮಾತ್ರ ಅವರು ಆದರ್ಶ ವ್ಯಕ್ತಿಯಾಗುತ್ತಾರೆ ಎಂದು ಕಾರ್ಮಿಕ ಕಲ್ಯಾಣ ನಿಧಿಯ ಕೇಂದ್ರ ಸಲಹಾ ಸಮಿತಿ ಸದಸ್ಯ ಶರಣಪ್ಪ ಮಾನೇಗಾರ ಹೇಳಿದರು. ತಾಲೂಕಿನ ಯರಗೋಳ ಗ್ರಾಮದಲ್ಲಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆಯ ಪ್ರಮೋದ ಸ್ಮಾರಕ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರಿಯಾಂಕಾ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ತಮ್ಮ ತಂದೆಯ ಸ್ಮರಣಾರ್ಥವಾಗಿ ಶಾಲೆಗೆ ಎರಡು ಕಂಪ್ಯೂಟರ್ ನೀಡುವುದಾಗಿ ಭರವಸೆ ನೀಡಿದರು.