ರಾಯಚೂರು

ಕೃವಿವಿ ನೌಕರರಿಂದ ಇಂದು ಧರಣಿ

ರಾಯಚೂರು: ಇಲ್ಲಿನ ಕೃಷಿ ವಿವಿಯ ವಿವಿಧೆಡೆಯ ಕೃಷಿ ಕೇಂದ್ರಗಳಲ್ಲಿ ಕಳೆದ 15ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹಂಗಾಮಿ ಕಾರ್ಮಿಕರನ್ನು ಸೇವೆಯಿಂದ ತೆಗೆದು ಮಾನವ ಸಂಪನ್ಮೂಲ ಏಜೆನ್ಸಿಗಳ ಮೂಲಕ ನೇಮಕಾತಿಗೆ ಮುಂದಾಗಿರುವ ಕ್ರಮ ಖಂಡಿಸಿ ಜ.24ರಂದು ಪ್ರತಿಭಟನೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೃಷಿ ವಿವಿ ಹಂಗಾಮಿ ನೌಕರರ ಸಂಘದ ಕಾರ್ಯಕರ್ತರು ಸಂಘದ ಗೌರವಾಧ್ಯಕ್ಷ ಆರ್. ಮಾನಸಯ್ಯ ಅವರ ನೇತೃತ್ವದಲ್ಲಿ ಧರಣಿ ನಡೆಸಿ, ಒಟ್ಟು 720ಜನ ಹಂಗಾಮಿ ನೌಕರರ ಭವಿಷ್ಯದ ಬಗ್ಗೆ ಕೈಗೊಂಡಿರುವ ಅಪಾಯಕಾರಿ ನಿರ್ಧಾರವನ್ನು ಕೂಡಲೇ ಕೈಬಿಡುವಂತೆ ಹೋರಾಟದ ವೇಳೆ ಒತ್ತಾಯಿಸುವುದಾಗಿ ಸಂಘ ತಿಳಿಸಿದೆ.
ಶರಣಬಸವ ಗಲಗ
ರಾಯಚೂರು: ನಗರದ ಸ್ಪ್ರೆಡ್ ಸಂಸ್ಥೆಯ ಪ್ರಮುಖ ಶರಣಬಸವ ಗಲಗ ಅವರು ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರು ಮರಣಕ್ಕೂ ಮುನ್ನ ತಮ್ಮ ದೇಹವನ್ನು ಮರಣಾನಂತರದಲ್ಲಿ ನಗರದ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾನ ಮಾಡಿರುವುದಾಗಿ ಪ್ರಕಟಿಸಿದ್ದರು. ಮೃತರ ದೇಹದಾನವನ್ನು ಮಾಡಿದ ಹಿನ್ನೆಲೆಯಲ್ಲಿ ಜ.24ರಂದು ಬೆಳಗ್ಗೆ 10.30ಕ್ಕೆ ಶರಣಬಸವ ಅವರ ಕಳೇಬರವನ್ನು ರಿಮ್ಸ್ ಆಸ್ಪತ್ರೆಗೆ ಹಸ್ತಾಂತರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ