ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಟ್ರ್ಯಾಕ್ಟರ್ ಹರಿದು ವ್ಯಕ್ತಿ ಸಾವು

Lingaraj Badiger
Updated On : 29 Jan 2013, 11:27 am

ರಾಯಚೂರು: ದೇವದುರ್ಗದ ಹೊರವಲಯದಲ್ಲಿ ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ಮಲ್ಲೇಶ್ ಎಂದು ಗುರುತಿಸಲಾಗಿದೆ. ಈತ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಆಯತಪ್ಪಿ ಕೆಳಗೆ ಬಿದ್ದಿದ್ದು ಆತನ ಮೇಲೆ ಟ್ರ್ಯಾಕ್ಟರ್ ಸಾಗಿದ್ದರಿಂದ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತನಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನಸಿಕ ರೋಗಿ ಆತ್ಮಹತ್ಯೆ
ರಾಯಚೂರು: ಸಿಂಧನೂರು ತಾಲೂಕಿನ ತುರಕಟ್ಟಿ ಬಳಿ ಮಾನಸಿಕ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಈತ ಸುಮಾರು 2 ವರ್ಷಗಳಿಂದ ಮಾನಸಿಕ ರೋಗದಿಂದ ಬಳಲುತ್ತಿದ್ದು, ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ರೋಗ ಗುಣವಾಗಿರಲಿಲ್ಲ. ಅದರಿಂದ ಬೇಸತ್ತಿದ್ದ ಆತ ಕ್ರಿಮಿನಾಶಕ ಸೇವಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement