ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

Lingaraj Badiger
Updated On : 30 Jan 2013, 11:04 am

ಲಿಂಗಸ್ಗೂರು: ಕ್ರೀಡೆಗಳು ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಮೂಲಕ ಆರೋಗ್ಯ ವೃದ್ಧಿಗೆ ಸಹಕಾರಿ ಎಂದು ಜಿಲ್ಲಾಧಿಕಾರಿ ಎಂ.ವಿ.ಸಾವಿತ್ರಿ ಹೇಳಿದರು.
ಪಟ್ಟಣದ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಪಂ ಮತ್ತು ತಾಲೂಕು ಕ್ರೀಡಾಂಗಣ ಸಮಿತಿ ಸಂಯುಕ್ತಾಶ್ರಯದಲ್ಲಿ ವುಡನ್ ಕೋರ್ಟ್ ಹಾಗೂ ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಗಳು ಪರಸ್ಪರ ಸಹಬಾಳ್ವೆಯ ಸಂಕೇತವಾಗಿದ್ದು, ಇಂತಹ ಪಂದ್ಯಾವಳಿ ಹಮ್ಮಿಕೊಳ್ಳುವ ಮೂಲಕ ಯುವಕರಲ್ಲಿ ಕ್ರೀಡಾ ಮನೋಭಾವ ಮೂಡಿಸಲು ಸಾಧ್ಯ ಎಂದರು.
ಸ್ಥಳೀಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಮಕ್ಕಳಿಗಾಗಿ ಬಾಲ ಭವನ ನಿರ್ಮಿಸುವ ಜೊತೆಗೆ ಪಕ್ಕದ ಕರಡಕಲ್ ಕೆರೆ ಅಭಿವೃದ್ಧಿ ಮತ್ತು ನಗರದ ಸೌಂದರ್ಯೀಕರಣಕ್ಕೆ ಆದ್ಯತೆ ನೀಡಲು ಸಾರ್ವಜನಿಕರಿಂದ ಅಹವಾಲುಗಳು ಬಂದಿವೆ. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಸರ್ಕಾರದಿಂದ ಅನುಮತಿ ದೊರೆಯುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಶಾಸಕ ಮಾನಪ್ಪ ವಜ್ಜಲ್ ಮಾತನಾಡಿ, ಜಿಲ್ಲೆಯಲ್ಲಿ ಲಿಂಗಸ್ಗೂರು ತಾಲೂಕು ವಿವಿಧ ರಂಗಗಳಲ್ಲಿ ತನ್ನದೆ ಆದ ವಿಶೇಷತೆ ಪಡೆದಿದ್ದು, ಕ್ರೀಡಾಂಗಣ ಮತ್ತು ಕೆರೆ ಅಭಿವೃದ್ಧಿ ತಾವು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಪಂ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಭೂಪನಗೌಡ ಕರಡಕಲ್, ಪುರಸಭೆ ಅಧ್ಯಕ್ಷೆ ದುರುಗಮ್ಮ ರಾಮಸ್ವಾಮಿ, ಸಹಾಯಕ ಆಯುಕ್ತ ಟಿ.ಯೋಗೇಶ, ತಹಸೀಲ್ದಾರ್ ರಾಚಪ್ಪ ಸಮೇದ, ಡಿವೈಎಸ್‌ಪಿ ಸೂರ್ಯವಂಶಿ ಸೇರಿದಂತೆ ಒಳಾಂಗಣ ಕ್ರೀಡಾಂಗಣ ಸಮಿತಿ ಅಧಿಕಾರಿಗಳು, ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement