ಸಿಂಧನೂರು: ತಾಲೂಕಿನ ಉದ್ಬಾಳ(ಯು) ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ನ್ನು ವಿತರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಪಂ ಸದಸ್ಯೆ ಭಾರತಿ ಶಂಕರರಾವ್ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿರುವ ಭಾಗ್ಯಲಕ್ಷ್ಮೀ ಯೋಜನೆ ಮಹಿಳೆಯರಿಗೆ ಅತಿ ಉಪಯುಕ್ತವಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಉದ್ಬಾಳ ಗ್ರಾಪಂ ಅಧ್ಯಕ್ಷೆ ಸಂಗಮ್ಮ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲೆ ಮುಖ್ಯಗುರು ಬಸವರಾಜ, ಅಂಗನವಾಡಿ ಮೇಲ್ವಿಚಾರಕಿ ಸುನಿತಾ, ಬಸಮ್ಮ, ಶಿಕ್ಷಕ ವಿಶ್ವನಾಥ, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.