ರಾಯಚೂರು

ವಸತಿ ನಿಲಯ ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು: ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ನಗರದ ಡಾ.ಅಂಬೇಡ್ಕರ್ ಪದವಿ ವಿದ್ಯಾರ್ಥಿಗಳ ವಸತಿ ನಿಲಯದ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.
ನಗರದ ಮಂತ್ರಾಲಯ ರಸ್ತೆಯಲ್ಲಿರುವ ವಸತಿ ನಿಲಯದ ಮುಂದೆ ಪ್ರತಿಭಟನೆ ನಡೆಸಿ ಸಮಾಜ ಕಲ್ಯಾಣ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ, ವಸತಿ ನಿಲಯದಲ್ಲಿನ ಸಮಸ್ಯೆಗಳತ್ತ ಇಲಾಖೆಯೂ ಗಮನಹರಿಸುತ್ತಿಲ್ಲ. ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೊಂದರೆ ಎದುರಿಸುತ್ತಿದ್ದಾರೆಂದು ದೂರಿದರು.
ಇಲಾಖೆ ವಿಫಲ: ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ವಸತಿ ನಿಲಯದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಅನೇಕ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಆಗಮಿಸಿ ವಾಸವಾಗಿದ್ದಾರೆ. ಆದರೆ ಅವರಿಗೆ ಅಗತ್ಯ ಸವಲತ್ತು ಒದಗಿಸುವಲ್ಲಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು.
ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿಲ್ಲ. ಸಾಮಾನ್ಯ ಜ್ಞಾನದ ಪುಸ್ತಕಗಳನ್ನೂ ನೀಡಿಲ್ಲ. ವಸತಿ ನಿಲಯಕ್ಕೆ ಆವರಣ ಗೋಡೆ ನಿರ್ಮಿಸುವಂತೆ ಮಾಡಿದ ಮನವಿಗೆ ಇದುವರೆಗೆ ಇಲಾಖೆ ಗಮನಹರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾನಿರತರು, ಪದವಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಸತಿ ನಿಲಯದ ವಿದ್ಯಾರ್ಥಿಗಳನ್ನು ಪ್ರಸಕ್ತ ವರ್ಷ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವುದನ್ನೇ ಇಲಾಖೆ ಮರೆತಂತಿದೆ ಎಂದು ಟೀಕಿಸಿದರು.
ಕುಡಿವ ನೀರಿನ ಸಮಸ್ಯೆ: ವಸತಿ ನಿಲಯದಲ್ಲಿ ನೀರಿನ ಸಮಸ್ಯೆಯಿದ್ದು, ನಗರಸಭೆಯಿಂದ ಕುಡಿವ ನೀರಿನ ಸೌಲಭ್ಯ ಕಲ್ಪಿಸಬೇಕು. ಅಡುಗೆ ತಯಾರಿಸಲು ಅಗತ್ಯ ನೀರಿನ ವ್ಯವಸ್ಥೆ ಮಾಡಬೇಕು. ವಸತಿ ನಿಲಯಕ್ಕೆ ಹೆಚ್ಚುವರಿ ಗಣಕ ಯಂತ್ರಗಳನ್ನು ಕೂಡಲೇ ಒದಗಿಸಬೇಕೆಂದು ಆಗ್ರಹಿಸಿದರು.
ಜೈವಿಕ ಅನಿಲ ಸೌಲಭ್ಯವನ್ನು ವಸತಿ ನಿಲಯಕ್ಕೆ ಒದಗಿಸಬೇಕು. ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಮನಬಂದಂತೆ ವಿದ್ಯಾರ್ಥಿ ವೇತನ ಸೌಲಭ್ಯ ಪಡೆಯುತ್ತಿದ್ದು, ಅದರ ಮೇಲೆ ನಿಗಾಯಿರಿಸಿ ಅರ್ಹರಿಗೆ ಮಾತ್ರ ಹಾಗೂ ಹೆಚ್ಚುವರಿ ವಿದ್ಯಾರ್ಥಿ ವೇತನ ದೊರೆಯದಂತೆ ಸಮಾಜ ಕಲ್ಯಾಣ ಎಚ್ಚರಿಕೆ ವಹಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದರು. ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!