ಜಿಲ್ಲೆಯ ವಿವಿಧೆಡೆ ಮಳೆ
ರಾಯಚೂರು: ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ತುಂತುರು ಮಳೆಯಾಯಿತು. ನಗರದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಯಿತು.
ನಗರದಲ್ಲಿ ಮಳೆ ಸುರಿದಿದ್ದರಿಂದ ರಸ್ತೆಗೆ ನೀರು ನುಗ್ಗಿ ಸಂಚಾರಕ್ಕೆ ವ್ಯತ್ಯಯವಾಯಿತು. ಚರಂಡಿಗಳು ಉಕ್ಕಿ ಹರಿದು ತಗ್ಗು ಪ್ರದೇಶದ ನಿವಾಸಿಗಳು ಆತಂಕದ ಸ್ಥಿತಿ ಎದುರಿಸುವಂತಾಯಿತು. ಮಳೆಯಿಂದಾಗಿ ವಿದ್ಯುತ್ ಕೈಕೊಟ್ಟು ಜನತೆ ತೊಂದರೆ ಅನುಭವಿಸಿದರು. ಇದೇ ವೇಳೆ ಜಿಲ್ಲೆಯ ದೇವದುರ್ಗ, ಸಿಂಧನೂರು ಪಟ್ಟಣಗಳಲ್ಲಿ ತುಂತುರು ಮಳೆಯಾದ ಬಗ್ಗೆ ವರದಿಯಾಗಿದೆ.