ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕಾಲೇಜು ಸಿಬ್ಬಂದಿ ವರ್ಗಾವಣೆಗೆ ಆಗ್ರಹ

Mainashree
Updated On : 7 Jul 2013, 11:49 am

ರಾಯಚೂರು: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿನ ಸಿಬ್ಬಂದಿ ವರ್ಗಾವಣೆಗೆ ಆಗ್ರಹಿಸಿ ಜೈಕರವೇ ಸಂಘಟನೆ ಕಾರ್ಯಕರ್ತರು ಶನಿವಾರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸು ತ್ತಿರುವ ಸಿಬ್ಬಂದಿಗಳು 20-25 ವರ್ಷ ಪೂರೈಸಿದ್ದು, ಅಂಥವರನ್ನು ಕೂಡಲೇ ಬೇರೆ ಸ್ಥಳಗಳಿಗೆ ವರ್ಗಾಯಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಐಟಿಐ ಕಾಲೇಜಿನಲ್ಲಿ ಭ್ರಷ್ಟಾಚಾರಕ್ಕೆ ಸಿಬ್ಬಂದಿ ಅವಕಾಶ ಮಾಡಿದ್ದಾರೆ. ವಿದ್ಯಾರ್ಥಿಗಳಿಂದ ಹಣ ಪಡೆದು ಒಂದು ವಿಭಾಗದಿಂದ ಮತ್ತೊಂದು ವಿಭಾಗಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ. ಸರ್ಕಾರ ತರಬೇತಿ ಸಂಸ್ಥೆಗೆ ಒದಗಿಸಿದ ಬೆಲೆ ಬಾಳುವ ವಸ್ತುಗಳು ನಾಪತ್ತೆಯಾಗಿವೆ. ಅದಕ್ಕೆ ಸಿಬ್ಬಂದಿ ಕಾರ್ಯವೈಖರಿಯೇ ಕಾರಣ ಎಂದು ದೂರಿದರು.
ಈ ಹಿನ್ನೆಲೆಯಲ್ಲಿ ಅಕ್ರಮ ಕಾರ್ಯಗಳಲ್ಲಿ ತೊಡಗಿರುವ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ವಸಂತಕುಮಾರ್, ವೆಂಕಟಸ್ವಾಮಿ, ಉರುಕುಂದಿ, ಈಶ್ವರ್, ಎಸ್. ರಾಮಪ್ಪ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement