ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಇಂದು ಹಲವೆಡೆ ವಿದ್ಯುತ್ ವ್ಯತ್ಯಯ

Lingaraj Badiger
Updated On : 9 Jul 2013, 11:07 am

ರಾಯಚೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಬೃಹತ್ ಕಾಮಗಾರಿ ವಿಭಾಗದವರು ನಗರದ 220 ಕೆ.ವಿ. ವಿದ್ಯುತ್ ಮಾರ್ಗವನ್ನು ನಿರ್ಮಿಸುವ ಹಿನ್ನೆಲೆ ಜು.9ರಂದು ಯರಗೇರಾ, ಕಲ್ಮಲಾ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಗರದ 220 ಕೆ.ವಿ. ವಿದ್ಯುತ್ ಉಪ ಕೇಂದ್ರದಿಂದ 110 ಕೆ.ವಿ. ಮಾರ್ಗವನ್ನು ಹೊಸದಾಗಿ ಮಟಮಾರಿಯ ವಿದ್ಯುತ್ ಉಪ ಕೇಂದ್ರದವರೆಗೆ ನಿರ್ಮಿಸುತ್ತಿದ್ದು, ಯರಗೇರಾ ಮತ್ತು ಕಲ್ಮಲಾ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಜು.9ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವ್ಯತ್ಯಯವಾಗಲಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ. ಕೆಪಿಟಿಸಿಎಲ್‌ನಲ್ಲಿ ತುರ್ತು ಕೆಲಸದ ನಿಮಿತ್ತ ತಾಲೂಕಿನ ಮಲಿಯಾಬಾದ್, ವಡವಟ್ಟಿ ಹಾಗೂ ಮಾನವಿ ತಾಲೂಕಿನ ಮದ್ಲಾಪುರ, ಕುರ್ಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಜು.9ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಅಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಸಂಸ್ಥೆ ಮನವಿ ಮಾಡಿದೆ.
ಇಂದು ನೀರಾವರಿ ಸಲಹಾ ಸಮಿತಿ ಸಭೆ
ರಾಯಚೂರು: ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ 97ನೇ ಸಭೆಯು ಜು. 9ರಂದು ಮುನಿರಾಬಾದ್ ನಲ್ಲಿ ನಡೆಯಲಿದೆ. ಅಂದು ಬೆ.11.30ಕ್ಕೆ ಮುನಿರಾಬಾದ್‌ನ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದ್ದು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ಸದಸ್ಯರು ಹಾಗೂ ಆಹ್ವಾನಿತರು ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆ ನೀಡುವಂತೆ ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ  ಅಧೀಕ್ಷಕ ಅಭಿಯಂತರರ ಕಚೇರಿ ಮನವಿ ಮಾಡಿದೆ.
ನಾಳೆ ತ್ರೈಮಾಸಿಕ ಕೆಡಿಪಿ ಸಭೆ
ರಾಯಚೂರು: ನಗರದ ಜಿಪಂ ಸಭಾಂಗಣದಲ್ಲಿ ಜು.10ರಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಕರೆಯಲಾಗಿದೆ. ಅಂದು ಬೆಳಗ್ಗೆ 11.30ಕ್ಕೆ ಜಿಪಂ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ 2013-14ರ ಜೂನ್‌ವರೆಗಿನ ಪ್ರಗತಿ ಪರೀಶೀಲನೆ ನಡೆಸಲಾಗುತ್ತದೆ. ಸಭೆಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಖುದ್ದಾಗಿ ತಪ್ಪದೇ ಸಭೆಯಲ್ಲಿ ಹಾಜರಿರಲು ಜಿಪಂ ಸಿಇಒ ಜ್ಞಾನಪ್ರಕಾಶ್ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement