ಕೃಷಿ ವಿವಿ ಕೌನ್ಸೆಲಿಂಗ್ ಆರಂಭ
ಕನ್ನಡಪ್ರಭ ವಾರ್ತೆ, ರಾಯಚೂರು, ಜು.8
ನಗರದ ರಾಯಚೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಬಿಎಸ್ಸಿ(ಕೃಷಿ), ಬಿಟೆಕ್(ಕೃಷಿ ತಾಂತ್ರಿಕ) ಕೋರ್ಸುಗಳಿಗೆ ಪ್ರವೇಶಕ್ಕೆ ಸೋಮವಾರ ಕೌನ್ಸೆಲಿಂಗ್ ನಡೆಯಿತು.
ಕೃಷಿ ವಿವಿ ಪ್ರೇಕ್ಷಾಗೃಹದಲ್ಲಿ ನಡೆದ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ವಿವಿ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ಕೋರ್ಸುಗಳಿಗೆ ಪ್ರವೇಶಕ್ಕೆ ಅಭ್ಯರ್ಥಿಗಳು ಹಾಜರಾಗಿದ್ದರು. ಪಿಯುಸಿಯಲ್ಲಿ ಶೇ.60 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಶೇ.50 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳ ಪ್ರವೇಶ ಪ್ರಕ್ರಿಯೆ ಜು.9ರಂದು ನಡೆಯಲಿದೆ ಎಂದು ಕೃಷಿ ವಿವಿ ತಿಳಿಸಿದೆ.