ಲಾಡ್ಜ್‌ನಲ್ಲಿ ಬೆಂಕಿ ಆಕಸ್ಮಿಕ: ಸಾವಿರಾರು ರು. ಹಾನಿ
ರಾಯಚೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಲಕ್ಷ್ಮಿ ಲಾಡ್ಜ್ ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಸಾವಿರಾರು ರು. ಆಸ್ತಿ ಹಾನಿಯಾಗಿದೆ.
ಬೆಳಗ್ಗೆ ವಸತಿ ಗೃಹದ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಅಲ್ಲಿ ಸಂಗ್ರಹಿಸಿಟ್ಟಿದ್ದ ಹಾಸಿಗೆ, ಟವೆಲ್ ಮತ್ತಿತರೆ ಸಾಮಗ್ರಿ ಸುಟ್ಟಿದ್ದು, ರು. 65ಸಾವಿರ ಸಾಮಗ್ರಿಗೆ ಹಾನಿಯಾಗಿದೆ ಎಂದು ಹೇಳಲಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ವಸತಿ ಗೃಹದ ಸಿಬ್ಬಂದಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸುವ ಮೂಲಕ ಹೆಚ್ಚಿನ ಹಾನಿ ತಡೆದರು.