ಎಲ್ಲಾ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸುವೆ: ಶಾಸಕ ಬಾದರ್ಲಿ
ಸಿಂಧನೂರು: ವಿಧಾನಸಭಾ ಚುನಾವಣೆ ಸಮಯದಲ್ಲಿ ಜನರಿಗೆ ನೀಡಿದ ಆಶ್ವಾಸನೆಗಳಿಗೆ ಬದ್ಧನಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸುವ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳತ್ತೇನೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ತಾಲೂಕಿನ ಸಿಂಗಾಪುರ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಕೇವಲ ಒಂದು ತಿಂಗಳಲ್ಲಿ ಸಿಂಧನೂರು ಕ್ಷೇತ್ರಕ್ಕೆ ಕುಡಿಯುವ ನೀರಿನ ಯೋಜನೆಗಾಗಿ 72 ಕೋಟಿ ಅನುದಾನ ಮಂಜೂರು ಮಾಡಿದ್ದು, ಕ್ಷೇತ್ರಕ್ಕೆ ಲಭಿಸಿದ ಮೊಟ್ಟಮೊದಲ ಅನುದಾನವಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಧಿಕ ಪ್ರಮಾಣದಲ್ಲಿ ಹಣ ಮಂಜೂರು ಮಾಡಿಸಲು ನಿರಂತರ ಯತ್ನಿಸುವುದಾಗಿ ಭರವಸೆ ನೀಡಿದರು. ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಎಂ. ಕಾಳಿಂಗಪ್ಪ ವಕೀಲ ಮಾತನಾಡಿದರು.