ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಲಿಂಗಸ್ಗೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಲಿಂಗಸ್ಗೂರು ವ್ಯಾಪ್ತಿಯಲ್ಲಿ ಖಾಲಿ ಇರುವ 5 ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಹಾಗೂ 7 ಗ್ರಾಮಗಳ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಗ್ರಾಮಗಳ ಗ್ರಾಪಂ, ಕೃಷಿ ಸಂಪರ್ಕ ಕೇಂದ್ರ, ಪ್ರಾಥಮಿಕ ಶಾಲೆ, ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಸಮುದಾಯ ಭವನ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ ನೋಟೀಸ್ ಫಲಕಗಳಲ್ಲಿ ವಿವರಣೆ ನೋಡಬಹುದಾಗಿದೆ. ಅರ್ಜಿ ಸಲ್ಲಿಸಲು 2013 ಆಗಸ್ಟ್ 12 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಲಿಂಗಸ್ಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಂಪರ್ಕಿಸುವಂತೆ ಸಿಡಿಪಿಒ ಪ್ರಭಾಕರ ಕೋರಿದ್ದಾರೆ.