ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ವಿವೇಕ' ಯುವ ಸಮೂಹದ ಸ್ಫೂರ್ತಿ, ಆದರ್ಶ

Vishwanath S
Updated On : 14 Jul 2013, 12:42 pm

ಸಿಂಧನೂರು: ಸ್ವಾಮಿ ವಿವೇಕಾನಂದರು ಉತ್ತಮ ಚಿಂತಕ, ದಾರ್ಶನಿಕ, ಪ್ರಮುಖವಾಗಿ ಯುವಜನತೆಗೆ ಆದರ್ಶಪ್ರಾಯರಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ದೇವೇಂದ್ರಗೌಡ ಹೇಳಿದರು.
ಆದರ್ಶಗಳು ನಿರಂತರ: ಅವರು ಸ್ವಾಮಿ ವಿವೇಕಾನಂದರ 150ನೇ ವರ್ಷಾಚರಣೆ ಅಂಗವಾಗಿ ಜುಲೈ 16ರಂದು ನಗರಕ್ಕೆ ಆಗಮಿಸಲಿರುವ ಸ್ವಾಮಿ ವಿವೇಕಾನಂದ ರಥಯಾತ್ರೆಯ ಅಂಗವಾಗಿ ನಗರದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ದುದ್ದುಪೂಡಿ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವಿವೇಕಾನಂದರು ಬದುಕಿದ್ದು ಕೇವಲ 39 ವರ್ಷ. ಆದರೆ ಅವರ ತತ್ವ, ಆದರ್ಶಗಳು ನಿರಂತರವಾಗಿವೆ. ವಿಶೇಷವಾಗಿ ಯುವಕರು ಅವರ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಕಸಾಪ ಅಧ್ಯಕ್ಷೆ ರಮಾದೇವಿ ಶಂಭೋಜಿ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವರ ಕುರಿತ ಪ್ರಕಟವಾದ ಗ್ರಂಥಗಳನ್ನು ಓದಬೇಕೆಂದರು.
ಸಿಂಧನೂರು ಲಯನ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಮೆಹ್ತಾ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ  ಕ್ಲಬ್ ಕಾರ್ಯದರ್ಶಿ ನಾಗರಾಜ, ಮಾಜಿ ಅಧ್ಯಕ್ಷ ಮೋಹನ್, ದುದ್ದುಪೂಡಿ ಮಹಿಳಾ ಕಾಲೇಜಿನ ಕಾರ್ಯದರ್ಶಿ ಆರ್.ಸಿ. ಪಾಟೀಲ್, ಆದರ್ಶ ಪ್ರೌಢಶಾಲೆ ಪ್ರಭಾರಿ ಮುಖ್ಯಗುರು ವಿಶ್ವನಾಥ ಹಿರೇಮಠ, ಉಪಸ್ಥಿತರಿದ್ದರು.  
 ಬೀರಪ್ಪ ಶಂಭೋಜಿ ಸ್ವಾಗತಿಸಿದರು. ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಶ್ರೀಶೈಲ ಕೌದಿ ವಂದಿಸಿದರು. ವೀರೇಶ ಗೋನವಾರ ಕಾರ್ಯಕ್ರಮ ನಿರೂಪಿಸಿದರು.
ಬಹುಮಾನ ವಿತರಣೆ: ನಗರದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸ್ವಾಮಿ ವಿವೇಕಾನಂದರ ಜೀವನ ಹಾಗೂ ಸಾಧನೆಗಳ ಕುರಿತು ಏರ್ಪಡಿಸಿದ್ದ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದಲ್ಲಿ  ವೆಂಕಟೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಮೀನಾಕ್ಷಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಾಗೂ ವಿಕಾಸ ಪ್ರೌಢಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದುಕೊಂಡರು. ವಿಜೇತ ತಂಡದವರಿಗೆ ಜು. 16ರಂದು ವಾಸವಿ ಕಲ್ಯಾಣ ಮಂಟಪದಲ್ಲಿ ಜರಗುವ ಸ್ವಾಮಿ ವಿವೇಕಾನಂದರ ರಥಯಾತ್ರೆ ಹಾಗೂ ಉಪನ್ಯಾಸ ಕಾರ್ಯಕ್ರದಲ್ಲಿ ಬಹುಮಾನ ವಿತರಿಸಲಾಗುವುದೆಂದು ಪ್ರಚಾರ ಸಮಿತಿಯ ಸದಸ್ಯ ಬೀರಪ್ಪ ಶಂಭೋಜಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement