ಸ್ವಾಮಿ ವಿವೇಕಾನಂದರ ರಥಯಾತ್ರೆ ಸ್ವಾಗತಿಸಿ: ಡಿಸಿ
ಸಿಂಧನೂರು: ಜು.16ರಂದು ರಾಯಚೂರು ಜಿಲ್ಲೆಗೆ ಆಗಮಿಸಲಿರುವ 150ನೇ ಸ್ವಾಮಿ ವಿವೇಕಾನಂದರ ರಥಯಾತ್ರೆಗೆ ಶಾಲೆ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜ ಸೂಚಿಸಿದ್ದಾರೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದಿರುವ ಅವರು ರಾಮಕೃಷ್ಣ ಮಠ, ರಾಮಕೃಷ್ಣ ಮಿಷನ್ ಮತ್ತು ರಾಮಕೃಷ್ಣ ಭಾವಪ್ರಚಾರ ಪರಿಷತ್ನವರು ಹಮ್ಮಿಕೊಂಡಿರುವ ಸ್ವಾಮಿ ವಿವೇಕಾನಂದರ ರಥಯಾತ್ರೆ 16 ರಂದು ಜಿಲ್ಲೆಯ ಲಿಂಗಸೂಗೂರು, ಸಿಂಧನೂರು, 17ರಂದು ಮಾನವಿ, ರಾಯಚೂರು 18ರಂದು ದೇವದುರ್ಗ ತಾಲೂಕುಗಳಲ್ಲಿ ಸಂಚರಿಸಲಿದೆ. ಎಲ್ಲಾ ತಾಲೂಕುಗಳ ಪ್ರೌಢಶಾಲೆ, ಪ.ಪೂ. ಕಾಲೇಜು, ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಇದಕ್ಕೆ ಆಯಾ ಕಾಲೇಜುಗಳ ಪ್ರಾಚಾರ್ಯರು, ಸಿಬ್ಬಂದಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ.