ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

21ರಂದು ಪತ್ರಿಕಾ ದಿನಾಚರಣೆ

Lingaraj Badiger
Updated On : 19 Jul 2013, 11:43 am

ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ವತಿಯಿಂದ ಜು.21ರಂದು ನಗರದಲ್ಲಿ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಿಪೋರ್ಟರ್ಸ್ ಗಿಲ್ಡ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಯೋಜಿಸಲಾಗಿದೆ.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಂದು ಬೆಳಗ್ಗೆ 11ಕ್ಕೆ ನಡೆಯುವ ಸಮಾರಂಭವನ್ನು ವಾರ್ತಾ ಸಚಿವ ಸಂತೋಷ ಲಾಡ್ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಪತ್ರಕರ್ತರಿಗೆ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಪ್ರದಾನ ಮಾಡಲಿದ್ದಾರೆ.
ವಿಶೇಷ ಉಪನ್ಯಾಸವನ್ನು ಬೆಂಗಳೂರಿನ ರಾಜೀವಗಾಂಧಿ ಆರೋಗ್ಯ ವಿವಿ ಕುಲಸಚಿವ ಪ್ರೊ.ಎನ್.ಎಸ್. ಅಶೋಕಕುಮಾರ್ ಹಾಗೂ ವಾರ್ತಾ ಇಲಾಖೆ ನಿರ್ದೇಶಕ ವಿಶುಕುಮಾರ್ ನೀಡುವರು.
ಸಮಾರಂಭದಲ್ಲಿ ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ಜಿಪಂ ಅಧ್ಯಕ್ಷೆ ಲಲಿತಮ್ಮ, ಜಿಲ್ಲಾಧಿಕಾರಿ ಎಸ್.ಎನ್. ನಾಗ ರಾಜು, ಜಿಲ್ಲಾ ವಾರ್ತಾಧಿಕಾರಿ ಕನುಮಪ್ಪ, ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ವೆಂಕಟಸಿಂಗ್, ಸಂಘದ ರಾಜ್ಯ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಚೆನ್ನಬಸವಣ್ಣ ವಹಿಸಲಿದ್ದಾರೆಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement