ಆಕಸ್ಮಿಕ ವಿಷ ಸೇವನೆ: ವ್ಯಕ್ತಿ ಸಾವು
ರಾಯಚೂರು: ಮಾನವಿ ತಾಲೂಕಿನ ನವಲಕಲ್ ಗ್ರಾಮದ ಹೊಲದಲ್ಲಿ ಕ್ರಿಮಿನಾಶಕ ಸಿಂಪಡಿಸುತ್ತಿದ್ದ ವ್ಯಕ್ತಿ ಆಕಸ್ಮಿಕ ವಿಷ ಸೇವನೆಯಿಂದ ಸಾವಿಗೀಡಾಗಿದ್ದಾನೆ.
ಮೃತನನ್ನು ಮಂಜುನಾಥ ಎಂದು ಗುರುತಿಸಲಾಗಿದೆ. ಈತ ತನ್ನ ಹೊಲದಲ್ಲಿ ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿಷವು ಆತನ ದೇಹ ಸೇರಿದ್ದು, ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದರೂ ಚೇತರಿಸಿಕೊಳ್ಳದೆ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೈಕ್ನಿಂದ ಬಿದ್ದು ಸಾವು
ರಾಯಚೂರು: ಸಿಂಧನೂರು ತಾಲೂಕಿನ ಸಾಸಲಮರಿ ಕ್ಯಾಂಪಿನ ಬಳಿ ಬೈಕ್ನಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ.
ಮೃತನನ್ನು ಗಂಗಪ್ಪ ಎಂದು ಗುರುತಿಸಲಾಗಿದೆ. ಈತ ಬೈಕ್ನಲ್ಲಿ ಸಿರುಗುಪ್ಪ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಬೈಕ್ ಚಾಲಕ ಉಮೇಶ್ನ ನಿರ್ಲಕ್ಷ್ಯದ ಚಾಲನೆಯಿಂದ ಕ್ಯಾಂಪಿನ ಬಳಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು, ತೀವ್ರ ಗಾಯಗೊಂಡ ಗಂಗಪ್ಪ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.