ಪಡಿತರ ಆಹಾರ ಧಾನ್ಯ ಬಿಡುಗಡೆ
ರಾಯಚೂರು: ಜಿಲ್ಲೆಯಲ್ಲಿರುವ ಪಡಿತರ ಚೀಟಿದಾರರಿಗೆ ಜುಲೈ ತಿಂಗಳ ಆಹಾರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತಿಳಿಸಿದೆ.
ಜಿಲ್ಲೆಯಲ್ಲಿರುವ 54,204 ಅಂತ್ಯೋದಯ ಯೋಜನೆ, 2,21,946 ಬಿಪಿಎಲ್ ಕಾರ್ಡುದಾರರಿಗೆ ಆಹಾರ ಧಾನ್ಯಗಳನ್ನು ಬಿಡುಗಡೆ ಮಾಡಿದ್ದು, ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಚೀಟಿಗೆ 29 ಕೆಜಿ ಅಕ್ಕಿ ಹಾಗೂ 6 ಕೆಜಿ ಗೋದಿ ಪ್ರತಿ ಕಾರ್ಡಿಗೆ ವಿತರಿಸಲಾಗುವುದು.
ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ವ್ಯಕ್ತಿಗೆ 10 ಕೆಜಿಯಂತೆ ಮೂರಕ್ಕಿಂತ ಹೆಚ್ಚಿನ ವ್ಯಕ್ತಿಗಳಿರುವ ಕುಟುಂಬಕ್ಕೆ 30 ಕೆಜಿ ಅಕ್ಕಿ ಪ್ರತಿ ಕೆಜಿಗೆ 1ರ ದರದಲ್ಲಿ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಪ್ರತಿ ಕಾರ್ಡಿಗೆ 1 ಕೆಜಿಯಂತೆ ಸಕ್ಕರೆಯನ್ನು 13.50ಕ್ಕೆ ನೀಡಲಾಗುತ್ತಿದೆ. ಪಡಿತರ ಚೀಟಿದಾರರು ಜು. 25ರೊಳಗೆ ನಿಗದಿಪಡಿಸಿದ ಪ್ರಮಾಣ, ದರದಂತೆ ಧಾನ್ಯ ಪಡೆಯಲು ಸೂಚಿಸಲಾಗಿದೆ.