ಜನಪರ ಬಜೆಟ್ ಮಂಡನೆ; ದಸಂಸ ಅಭಿನಂದನೆ
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಜು.19
ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇತ್ತೀಚಿಗೆ ಮಂಡಿಸಿದ ಜನಪರ ಬಜೆಟ್ಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪ್ರಭುಲಿಂಗ ಮೇಗಳಮನಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಯೋಜನಾ ಆಯೋಗದ ನಿರ್ದೇಶನದಂತೆ ವಿಶೇಷ ಘಟಕ ಯೋಜನೆಯನ್ನು ಸರ್ಕಾರದ ಮಾದರಿಯ ಕಾನೂನು ರಚಿಸುವ ಕುರಿತು ಬಜೆಟ್ನಲ್ಲಿ ಘೋಷಣೆ ಮಾಡಿರುವುದು ಐತಿಹಾಸಿಕವಾಗಿದೆ.
ದಲಿತರ ಹಾಗೂ ಹಿಂದುಳಿದ ವರ್ಗಗಳ ಸಾಲಮನ್ನಾ ಮಾಡುವುದರ ಜೊತೆಗೆ ಉನ್ನತ ವ್ಯಾಸಂಗಕ್ಕೆ ರಾಜೀವ್ ಗಾಂಧಿ ಶಿಷ್ಯವೇತನ, ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳಿಗೆ 45 ವಸತಿ ನಿಲಯಗಳ ಆರಂಭಕ್ಕೆ ಚಾಲನೆ ನೀಡಿರುವುದು ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ವಹಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ.
ಬಡವರ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಏಳಿಗೆಗೆ ಆಶಾದಾಯಕದ ಹಲವಾರು ಯೋಜನೆಗಳನ್ನು ಘೋಷಣೆ ಮಾಡುದ್ದು, ಸಮಾಜ ಕಲ್ಯಾಣ ರು. 5.046 ಕೋಟಿ, ಆರೋಗ್ಯ ರು. 5.421 ಕೋಟಿ, ಗ್ರಾಮೀಣಾಭಿವೃದ್ಧಿ ರು. 8.218 ಕೋಟಿ ಸೇರಿದಂತೆ ಹಲವು ಇಲಾಖೆಗಳಿಗೆ ಸಾಮಾಜಿಕ ನ್ಯಾಯದಡಿ ಹಂಚಿಕೆ ಮಾಡಿರುವುದು ಶ್ಲಾಘನೀಯ.
ಗ್ರಾಮೀಣ ಜನರ ಬದುಕು ಉನ್ನತೀಕರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಹಾಗೂ ಗ್ರಾಪಂ ಮಟ್ಟದಲ್ಲಿ ಯುವಕರಿಗೆ ಹೊಸ ಉದ್ಯೋಗ ಸಾಕ್ಷೀಕರಿಸುವುದಕ್ಕೆ ಆದ್ಯತೆ ನೀಡಲಾಗಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಈ ಎಲ್ಲ ಯೋಜನೆಗಳನ್ನು ಪ್ರಕಟಿಸಿದ ಸರ್ಕಾರ ಜಾರಿಗೋಲಿಸಲು ಉಪ ಸಮಿತಿ ರಚಿಸಿ ರಚನಾತ್ಮಕ ಕಾರ್ಯ ನಿರ್ವಹಿಸಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.