ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ
ರಾಯಚೂರು: ನಗರದಲ್ಲಿ ತೀರಾ ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಜು.20ರಂದು ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಸ್ತೆ ತಡೆ ನಡೆಸಲಿದೆ. ಈ ಕುರಿತು ಸಂಘಟನೆ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಜೈನ್ ಪ್ರಕಟಣೆ ನೀಡಿ, ನಗರದ ಬಸವನಬಾವಿ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತ, ಹರಿಹರ ರಸ್ತೆ, ಮಹಾವೀರ ವೃತ್ತ, ಜೈನ್ ಮಂದಿರ, ಸೂಪರ್ ಮಾರ್ಕೆಟ್ ವೃತ್ತ, ತೀನ್ ಕಂದೀಲ್ ಮತ್ತಿತರೆಡೆ ರಸ್ತೆಗಳು ತೀರಾ ಹದಗೆಟ್ಟಿದ್ದು, ಜನತೆಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 10.45ಕ್ಕೆ ಈ ಪ್ರಮುಖ ರಸ್ತೆಗಳಲ್ಲಿ ರಸ್ತೆ ತಡೆ ನಡೆಸಿ ನಂತರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಹೊರಟು ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದು, ಎಲ್ಲರೂ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.