ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

Lingaraj Badiger
Updated On : 20 Jul 2013, 11:11 am

ರಾಯಚೂರು: ಸಿಂಧನೂರು ತಾಲೂಕಿನ ಧಡೇಸೂಗೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿಗೆ  ರೈತರಿಗೆ ಮತ್ತು ರೈತ ಮಹಿಳೆಯರಿಗೆ ತರಬೇತಿ ಆಯೋಜಿಸಲಾಗುತ್ತಿದ್ದು, ಒಟ್ಟು 17 ರೀತಿ ತರಬೇತಿ ನೀಡಲಾಗುತ್ತದೆ ಎಂದು ಕೃಷಿ ಕೇಂದ್ರದ ಪ್ರಕಟಣೆ ತಿಳಿಸಿದೆ. ಮೂರು ಹಾಗೂ ಐದು ದಿನಗಳ ತರಬೇತಿಗಳು,ಎರಡು ವಿಶೇಷ ತರಬೇತಿಗಳನ್ನು ಏರ್ಪಡಿಸುವ ಗುರಿಯಿದ್ದು,ತರಬೇತಿಯ ಅವಧಿಯಲ್ಲಿ ವಿವಿಧ ಕೃಷಿ ವಿಜ್ಞಾನಿಗಳಿಂದ ಕೃಷಿ ತಾಂತ್ರಿಕ ಮಾಹಿತಿ ಹಾಗೂ ಪ್ರಗತಿಪರ ರೈತರ ಜಮೀನುಗಳಿಗೆ ಸಂದರ್ಶನ, ಕೃಷಿ ತೋಟಗಾರಿಕೆ, ಹೈನುಗಾರಿಕೆ, ಸಮಗ್ರ ಕೃಷಿ ಪದ್ಧತಿ, ಗೊಬ್ಬರಗಳ ಬಳಕೆ ಮತ್ತು ಸಾವಯುವ ಕೃಷಿಗಳ ಬಗ್ಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದೆ. ತರಬೇತಿ ಅವಧಿಯಲ್ಲಿ ರೈತರಿಗೆ ವಸತಿ, ಉಪಹಾರ, ಊಟ ಹಾಗೂ ರೈತರು ತಮ್ಮ ಸ್ವಸ್ಥಳದಿಂದ ತರಬೇತಿ ಕೇಂದ್ರಕ್ಕೆ ಬಂದು ಹೋಗುವ ವೆಚ್ಚ ನೀಡಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ಕೃಷಿ ರೈತ ಸಂಪರ್ಕ ಕೇಂದ್ರಗಳಲ್ಲಿ ವಿಚಾರಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement