ಆರ್ಟಿಪಿಎಸ್: 7ನೇ ಘಟಕ ಸ್ಥಗಿತ
ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 7ನೇ ಘಟಕವು ತಾಂತ್ರಿಕ ದೋಷದಿಂದ ಶನಿವಾರ ಬೆಳಗ್ಗೆ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ. ವಿದ್ಯುತ್ ಘಟಕದ 7ನೇ ಘಟಕದಲ್ಲಿ ಕಂಡುಬಂದ ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಕೆಪಿಸಿ ಅಧಿಕಾರಿಗಳು ಘಟಕದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದಾರೆಂದು ಆರ್ಟಿಪಿಎಸ್ ಮೂಲಗಳು ತಿಳಿಸಿವೆ.