ನಾಳೆ ಗುರುಪೂರ್ಣಿಮೆ:ಮಹಾ ಸತ್ಸಂಗ
ರಾಯಚೂರು: ಗುರುಪೂರ್ಣಿಮೆ ಅಂಗವಾಗಿ ಜೀವನ ಕಲೆ ಸಂಸ್ಥೆಯಿಂದ ಜು.22ರಂದು ನಗರದಲ್ಲಿ ಮಹಾಸತ್ಸಂಗ ಹಾಗೂ ತಾಲೂಕು ಸಮಿತಿ ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಸಂಜೆ 5.30ಕ್ಕೆ ನಗರದ ಆರ್ಯವೈಶ್ಯ ಗೀತಾ ಮಂದಿರದಲ್ಲಿ ನಡೆಯುವ ಸಮಾರಂಭವನ್ನು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಉದ್ಘಾಟಿಸಲಿದ್ದಾರೆ. ಸಾನ್ನಿಧ್ಯವನ್ನು ಅಭಿನವ ರಾಚೋಟಿ ವೀರಶಿವಾಚಾರ್ಯರು ವಹಿಸಲಿದ್ದಾರೆ.
ಜೀವನಕಲೆ ಸಂಸ್ಥೆಯ ಗೌರವಾಧ್ಯಕ್ಷ ಎಂ.ಎಸ್. ಪಾಟೀಲ್, ಎಸ್ಪಿ ಎಸ್.ಬಿ. ಬಿಸನಳ್ಳಿ, ಸಹಾಯಕ ಆಯುಕ್ತೆ ಮಂಜುಶ್ರೀ, ಕೃಷಿ ವಿವಿ ಕುಲಪತಿ ಡಾ. ಬಿ.ವಿ. ಪಾಟೀಲ್, ಪಾರಸ್ ಮಲ್ ಸುಖಾಣಿ, ಸಾವಿತ್ರಿ ಪುರುಷೋತ್ತಮ, ಮಂಚಾಲ ಶ್ರೀನಿವಾಸ್ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಶಾಸಕರಾದ ಡಾ.ಶಿವರಾಜ್ ಪಾಟೀಲ್, ತಿಪ್ಪರಾಜು ಹವಾಲ್ದಾರ್ ಅವರಿಗೆ ಶ್ರೀಗುರುರಕ್ಷೆ ನೀಡಲಾಗುತ್ತದೆ. ಅಧ್ಯಕ್ಷತೆಯನ್ನು ಸಂಸ್ಥೆಯ ಜಿಲ್ಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಬಸವರಾಜ ಕಳಸ ವಹಿಸುವರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಜೀವನಕಲೆ ಸಂಸ್ಥೆಯ ಶಿಕ್ಷಕ ಮಲ್ಲಿಕಾರ್ಜುನ ಸ್ವಾಮಿ ಮನವಿ ಮಾಡಿದ್ದಾರೆ.