ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವೇತನ ಹೆಚ್ಚಳ, ಸೌಲಭ್ಯಕ್ಕೆ ಆಗ್ರಹ

Lingaraj Badiger
Updated On : 26 Jul 2013, 11:51 am

ಕನ್ನಡಪ್ರಭ ವಾರ್ತೆ,ರಾಯಚೂರು,ಜು.25
ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷರ ದಾಸೋಹ ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮತ್ತು ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗುರುವಾರ ನಗರದಲ್ಲಿ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಿದರು.
ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಬಿಸಿಯೂಟ ನೌಕರರು ತೀರಾ ಕಡಿಮೆ ವೇತನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ ಎಂದು ದೂರಿದರು.
ಬಿಸಿಯೂಟ ಯೋಜನೆಯಡಿ ಆರ್ಥಿಕವಾಗಿ ದುರ್ಬಲರಾಗಿರುವವರೇ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 1.26 ಲಕ್ಷ ಜನ ಮಹಿಳೆಯರು ಈ ಯೋಜನೆ ಅಡಿ ಕಾರ್ಯನಿರ್ವಹಿಸುತ್ತಿದ್ದು, ಅವರೆಲ್ಲರಿಗೆ ಸರ್ಕಾರ ಕಡಿಮೆ ವೇತನ ನೀಡುತ್ತಿದ್ದು ಕೂಡಲೇ ವೇತನ ಹೆಚ್ಚಳಕ್ಕೆ ಒತ್ತಾಯಿಸಿದರು.
ರಾಜ್ಯ ಸರ್ಕಾರ ಬಿಸಿಯೂಟ ಯೋಜನೆಯ ನಿರ್ವಹಣೆ ಕಾರ್ಯವನ್ನು ಖಾಸಗಿಯವರಿಗೆ ಒಪ್ಪಿಸಲು ಯೋಜಿಸಿದ್ದು, ಕೂಡಲೇ ತನ್ನ ನಿರ್ಧಾರ ಕೈಬಿಡಬೇಕು. ಖಾಸಗಿಯವರಿಗೆ ಯೋಜನೆಯನ್ನು ಒಪ್ಪಿಸದೇ ಸರ್ಕಾರ ನಿರ್ವಹಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಎಚ್. ಪದ್ಮಾ, ಡಿ.ಎಸ್. ಶರಣಬಸವ, ಗಿರಿಯಪ್ಪ ಪೂಜಾರ್, ಮರಿಯಮ್ಮ, ರೇಣುಕಾ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement