ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಬಿವಿಪಿಯಿಂದ ಕಾರ್ಗಿಲ್ ಹುತಾತ್ಮರ ದಿನಾಚರಣೆ

Mainashree
Updated On : 28 Jul 2013, 11:06 am

ಸಿಂಧನೂರು: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನಿಂದ ಕಾರ್ಗಿಲ್ ಹುತಾತ್ಮರ ದಿನವನ್ನು ಪಂಜಿನ ಮೆರವಣಿಗೆ ನಡೆಸುವ ಮೂಲಕ ಆಚರಿಸಲಾಯಿತು.
ಬಸವ ವೃತ್ತದಿಂದ ಬಸ್ ನಿಲ್ದಾಣದ ಮೂಲಕ ಮಹಾತ್ಮ ಗಾಂಧಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ಧಕ್ಕೂ ಘೋಷಣೆಗಳನ್ನು ಕಾರ್ಯಕರ್ತರು ಕೂಗಿದರು.
ಮೆರವಣಿಗೆಯಲ್ಲಿ ಎಬಿವಿಪಿ ನಿಕಟಪೂರ್ವ ಅಧ್ಯಕ್ಷ ಬಸವರಾಜ ಬಾದರ್ಲಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶರಣಯ್ಯ, ಶಿವಪುತ್ರಪ್ಪ, ಶಶಿಧರ, ಅಮರೇಶ ಗೊಂದಿ, ಮಹಾಂತೇಶ, ಸಂತೋಷ, ಪ್ರಶಾಂತ, ಅಜಿತ್ ಓಸ್ತವಾಲ್, ಸುಮಿತ್ ತಡಕಲ್ ಮತ್ತಿತರರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮಾಜಿ ಸೈನಿಕ ಹಂಪಯ್ಯಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement