ಅರ್ಜಿ ಆಹ್ವಾನ
ರಾಯಚೂರು: ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಗುಲ್ಬರ್ಗ ತಾಲೂಕಿನ ತಾಡತೆಗನೂರು ಗ್ರಾಮದ ವಿವೇಕಾನಂದ ವಿದ್ಯಾಪೀಠ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 1ಲಕ್ಷ ದೊಳಗಿರಬೇಕು. ಆಸಕ್ತಿಯುಳ್ಳ ವಿದ್ಯಾರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಯಚೂರು ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಉಚಿತ ಪಡೆದು ಆ.8 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಯಚೂರು ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.