ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನಿರುದ್ಯೋಗಿಗಳಿಗೆ ತರಬೇತಿ, ಆಹ್ವಾನ

Rashmi Kasaragodu
Updated On : 30 Jul 2013, 11:35 am

ರಾಯಚೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರಾಜ್ಯ ಹಿಂದುಳಿದ ವರ್ಗಗಳ ನಿರುದ್ಯೋಗಿ ಮಹಿಳಾ- ಪುರುಷ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ನಿರ್ವಹಿಸುವ ಮೈಸೂರಿನ ಸೆಂಟ್ರಲ್ ಇನ್ಸಟ್ಯೂಟ್ ಆಫ್ ಪ್ಲಾಸ್ಟಿಕ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯಿಂದ ವಿವಿಧ ವೃತ್ತಿಗಳಲ್ಲಿ ತರಬೇತಿಗೆ ಅರ್ಜಿಆಹ್ವಾನಿಸಲಾಗಿದೆ.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯ ಕಚೇರಿಯಿಂದ ಅಥವಾ ಇಲಾಖೆಯ ವೆಬ್ಸೈಟ್ ವಿಳಾಸ     ಢಿಢಿಢಿ.್ಞಛ್ಛಿಢಿಜ.್ಝಟಿ
ದಿಂದ ಪಡೆದು,  ಅರ್ಜಿಯನ್ನು ಆ.8 ರೊಳಗೆ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಕೋರಲಾಗಿದೆ. ವೃತ್ತಿ ತರಬೇತಿಯು 6 ತಿಂಗಳದ್ದಾಗಿದ್ದು, 18ರಿಂದ 35 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಆಯಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗಳಲ್ಲಿ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಆ.21, ಆ.22 ರಂದು ಮಾಡಲಾಗುವುದು.
ರಾಜ್ಯದ ಹಿಂದುಳಿದ ವರ್ಗಗಳ ಇಲಾಖೆಯ ವೆಬ್ಸೈಟ್ ಢಿಢಿಢಿ.್ಞಛ್ಛಿಢಿಜ.್ಝಟಿ ನಲ್ಲಿ ಆ.27 ರಂದು ಪ್ರಕಟವಾಗುವ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಮತ್ತು ಕೋರ್ಸ್ವಾರು ನಿಗದಿಪಡಿಸಿದ ವಿದ್ಯಾ ಅರ್ಹತೆಯ ಮೂಲ ಅಂಕಪಟ್ಟಿ ಮತ್ತು ಮುಚ್ಚಳಿಕೆ ಪ್ರಮಾಣ ಪತ್ರದೊಂದಿಗೆ ಮೈಸೂರು ಸಂಸ್ಥೆಗೆ ಸೆ.2ರಿಂದ ತರಬೇತಿಗೆ ಹಾಜರಾಗಬೇಕಾಗುತ್ತದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement