ಇಂದು ವಿದ್ಯಾರ್ಥಿಗಳ ಸಮಾವೇಶ
ರಾಯಚೂರು: ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಸಂಘಟನೆಯಿಂದ ಜು.31ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿ ಸಮಾವೇಶ ಆಯೋಜಿಸಲಾಗಿದೆ. ಅಂದು ಬೆಂಗಳೂರಿನ ಟೌನ್ ಹಾಲ್ನಲ್ಲಿ ಬೆಳಗ್ಗೆ 11ಕ್ಕೆ ಸಮಾವೇಶ ಹಮ್ಮಿಕೊಂಡಿದ್ದು, ಶಿಕ್ಷಣ ಕ್ಷೇತ್ರದ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಯಲಿದೆ. ಸಮಾವೇಶದ ಮುನ್ನ ಸರ್ಕಾರದ ಶಿಕ್ಷಣ ವಿರೋಧಿ ಮತ್ತು ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ಪ್ರತಿಭಟಿಸಲಾಗುತ್ತದೆ ಎಂದು ಸಂಘಟನೆ ಪ್ರಕಟಣೆ ತಿಳಿಸಿದೆ.