ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಾನವ ಹಕ್ಕುಗಳ ಕಾರ್ಯಾಗಾರ ಯಶಸ್ವಿ

Rashmi Kasaragodu
Updated On : 31 Jul 2013, 11:31 am

ದೇವದುರ್ಗ: ಪ್ರಸವ ಪೂರ್ವ ಲಿಂಗಪತ್ತೆ ಹಚ್ಚುವಂತೆ ಪ್ರೇರೇಪಿಸುವ ಮೂಲಕ ಹೆಣ್ಣು- ಗಂಡು ಎಂಬ ಭೇದದಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಬಿಇಒ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ ತಿಳಿಸಿದರು.
ಪಟ್ಟಣದ ಡಾನ್ ಬಾಸ್ಕೋ ಶಾಲೆಯಲ್ಲಿ ಆಯೋಜಿಸಿದ್ದ ಮಾನವ ಮತ್ತು ಮಕ್ಕಳ ಹಕ್ಕುಗಳ ಎರಡು ದಿನದ ತರಬೇತಿ ಕಾರ್ಯಾಗಾರವನ್ನು ಡಾನ್ ಬಾಸ್ಕೋ ಸಮಾಜಸೇವಾ ವತಿಯಿಂದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಪಂಚದ 42 ದೇಶಗಳು ಮತ್ತು ವಿಶ್ವಸಂಸ್ಥೆಯಿಂದ ಮಾನವ ಮತ್ತು ಮಕ್ಕಳ ಹಕ್ಕುಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ಕಾರ್ಯರೂಪಕ್ಕೆ ತರಬೇಕೆಂದು ಕೆಲಸ ನಿರ್ವಹಿಸುತ್ತಿವೆ ಎಂದರು.
ಈ ಸಂದರ್ಭದಲ್ಲಿ ಡಾನ್ ಬಾಸ್ಕೋ ಸಮಾಜ ಸೇವಾ ಸಂಸ್ಥೆಯ ಪ್ರಮುಖ ಫಾದರ್ಗಳು, ಪತ್ರಕರ್ತರ ಸಂಘದ ಅಧ್ಯಕ್ಷ ವೆಂಕಟೇಶ್ ನೀಲಗಲ್, ಸಿಡಿಪಿಒ ಇಲಾಖೆಯ ಲಕ್ಷ್ಮೀ ರಾಠೋಡ್, ಖಾಜಣ್ಣ, ಸಂತೋಷ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement