ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಟಿಸಿ ಅಳವಡಿಸಲು ಒತ್ತಾಯಿಸಿ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ

Lingaraj Badiger
Updated On : 1 Aug 2013, 11:06 am

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಜು.31
ತಾಲೂಕಿನ ಖೈರವಾಡಗಿ ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ ಸುಟ್ಟು ಗ್ರಾಮಸ್ಥರು ಪರದಾಡುವಂತಾಗಿದೆ. ಕೂಡಲೇ ಹೊಸ ಟಿಸಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಒತ್ತಾಯಿಸಿದರು.
ಮಾವಿನಬಾವಿ ಗ್ರಾಪಂ ವ್ಯಾಪ್ತಿಯ ಖೈರವಾಡಗಿ ಗ್ರಾಮದಲ್ಲಿ ಕಳೆದ ಮೂರು ತಿಂಗಳ ಹಿಂದೆ ವಿದ್ಯುತ್ ಪರಿವರ್ತಕ ಸುಟ್ಟು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಕತ್ತಲಲ್ಲಿ ದಿನದೂಡುವಂತಾಗಿದೆ. ಅಲ್ಲದೆ ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಜರುಗಿಸಿಲ್ಲ.
ಕೂಡಲೇ ವಿದ್ಯುತ್ ಪರಿವರ್ತಕ ಅಳವಡಿಸಲು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ವೆಂಕಟೇಶ ನಾಯಕ, ಕರಿಯಪ್ಪ, ಶಿವರಾಜ ಮಾಗಿ, ಹನುಮೇಶ ನಾಯಕ, ನೆಂಕಪ್ಪ, ದಸ್ತಗೀರ ಸಾಬ, ಹನುಮಂತಪ್ಪ ಬಾಂಬೆ, ಮಹಾಂತೇಶ, ಚನ್ನಪ್ಪ, ಬಸಣ್ಣ, ಸಂಗಣ್ಣ ಸುಂಕದ, ಖಾಜಾ ಹುಸೇನ್, ದೇವಪ್ಪ ಸುಂಕದ ಸೇರಿದಂತೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement