ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸಮಸ್ಯೆ ಪರಿಹಾರಕ್ಕೆ ಜನಸ್ಪಂದನ

Lingaraj Badiger
Updated On : 3 Jun 2013, 11:15 am

ಕನ್ನಡಪ್ರಭ ವಾರ್ತೆ, ದೇವದುರ್ಗ, ಜೂ.2
ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಜನಸ್ಪಂದನ ಕಾರ್ಯಕ್ರಮ ನೆರವಾಗಿದೆ ಎಂದು ಶಾಸಕ ವೆಂಕಟೇಶ ನಾಯಕ ಹೇಳಿದರು.
ತಾಲೂಕಿನ ಅರಕೇರಾ ಗ್ರಾಮದಲ್ಲಿ ಶನಿವಾರ ಶ್ರೀಸಿದ್ದಯ್ಯ ಹವಾಲ್ದಾರ ಸರ್ಕಾರಿ ಪ್ರೌಢಶಾಲೆಯ ಅವರಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಅರಕೇರಾ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಾಮಾಣಿಕವಾಗಿ ಪ್ರಯತ್ನಿಸಿ: ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಸರ್ಕಾರವು ಹೋಬಳಿ ಮಟ್ಟದಲ್ಲಿ ಅಧಿಕಾರಿಗಳು ಒಂದೆಡೆ ಸೇರಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದು ಜನಸ್ಪಂದನ ಸಭೆಯ ಆಶಯವಾಗಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವಂತೆ ಸೂಚಿಸಿದರು.
ಈ ವೇಳೆ ಶಾಲಾ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಕಂದಾಯ ಇಲಾಖೆಯಿಂದ ವೃದ್ಧರಿಗೆ ಮತ್ತು ವಿಕಲಚೇತನರಿಗೆ, ವಿಧವೆಯರಿಗೆ, ಮಾಸಾಶನ ಮಂಜೂರಾತಿ ಪ್ರಮಾಣ ಪತ್ರ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಾಗ್ಯಲಕ್ಷ್ಮೀ ಬಾಂಡ್‌ಗಳನ್ನು ಶಾಸಕ ವೆಂಕಟೇಶ ನಾಯಕ ವಿತರಿಸಿದರು.
ಸಹಾಯಕ ಕೃಷಿ ಅಧಿಕಾರಿ ಮಹಾದೇವಪ್ಪ ಮಾತನಾಡಿ, ತಾಲೂಕಿನಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು ಬಿತ್ತನೆ ಬೀಜಗಳನ್ನು ಅಗತ್ಯ ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ ಎಂದು ಹೇಳಿದರು.
ವಿವಿಧ ಇಲಾಖೆಗಳ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಕಾಂತ, ತಹಸೀಲ್ದಾರ್ ತುಕರಾಂ, ತಾಲೂಕು ಪಂಚಾಯಿತಿ ಸದಸ್ಯ ಸತ್ಯನಾರಾಯಣ ನಾಯಕ ಪೊಲೀಸ್ ಪಾಟೀಲ್, ಗ್ರಾಪಂ ಅಧ್ಯಕ್ಷೆ ನೀಲಮ್ಮ, ನಿವೃತ್ತ ಶಿಕ್ಷಕ ಮುದುಕಪ್ಪ, ಕಾಂಗ್ರೆಸ್ ಯುವ ಮುಖಂಡ ಚನ್ನವೀರಯ್ಯಸ್ವಾಮಿ ಹಿರೇಮಠ, ಮಲ್ಲಿಕ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement