ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಹೈನುಗಾರಿಕೆ ತರಬೇತಿಗೆ ಅರ್ಜಿ

Lingaraj Badiger
Updated On : 3 Jun 2013, 11:16 am

ರಾಯಚೂರು: ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ಹೈನುಗಾರಿಕೆ ತರಬೇತಿ ಶಿಬಿರವನ್ನು ಜೂನ್ ತಿಂಗಳಿನಲ್ಲಿ ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಕರೆಯಲಾಗಿದೆ. ಹೈನುಗಾರಿಕೆಯಲ್ಲಿ ಆಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಊಟ ವಸತಿ ವ್ಯವಸ್ಥೆ ಉಚಿತವಾಗಿದ್ದು, ಆಸಕ್ತ ರೈತ ಮಹಿಳೆಯರು, ಸ್ವಸಹಾಯ ಸಂಘದ ಸದಸ್ಯರು ಯುವಕರು ತಮ್ಮ ಹೆಸರು ವಿಳಾಸ, ದೂರವಾಣಿ,  ಇತ್ಯಾದಿ ವಿವರಗಳೊಂದಿಗೆ ಜೂ. 8ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಕಾರ್ಯನಿರ್ವಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿವಿವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ ಇಲ್ಲಿಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ-08354-244028, 244048 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.
ಇಂದಿನಿಂದ ಯೋಗ ಶಿಬಿರ
ರಾಯಚೂರು: ನಗರದ ಆಕಾಶವಾಣಿ ಕೇಂದ್ರದ ಹಿಂಭಾಗದಲ್ಲಿರುವ ಧ್ಯಾನ ಮಂದಿರದಲ್ಲಿ ಜೂ.3ರಿಂದ 15ರವರೆಗೆ ಸಹಜ ಸ್ಥಿತಿ ಯೋಗ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ ಕುರಿತು ಶಿಬಿರಾರ್ಥಿಗಳಿಗೆ ತರಬೇತಿ ನೀಡಲಾಗುವುದು. ಕಾರ್ಯಕ್ರಮವು ಸಹಜ ಯೋಗ ಪ್ರತಿಷ್ಠಾನದಿಂದ ಆಯೋಜಿಸಿದ್ದು, ಹೆಚ್ಚಿನ ಮಾಹಿತಿಗೆ ಸಹಜ ಯೋಗ ಪ್ರತಿಷ್ಟಾನ, ನಂ- 1-4-358, ಪ್ರಶಾಂತ, ಎಸ್‌ಬಿಎಚ್ ಕಾಲನಿ, ರಾಯಚೂರು ಇಲ್ಲಿಗೆ ಅಥವಾ ದೂರವಾಣಿ ಸಂಖ್ಯೆ 08532- 223573 ಇಲ್ಲವೇ 9483540310 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ.
10ರಂದು ಜಿಲ್ಲಾ ಸಾಲಪತ್ರ ಪ್ರಕಟ
ರಾಯಚೂರು: ಪ್ರಸಕ್ತ ಸಾಲಿನ ಜಿಲ್ಲಾ ವಾರ್ಷಿಕ ಸಾಲಪತ್ರ ಯೋಜನೆಯನ್ನು ಜೂ.10ರಂದು ಬಿಡುಗಡೆ ಮಾಡಲಾಗುತ್ತದೆ. ಅಂದು ಬೆಳಗ್ಗೆ 11ಕ್ಕೆ ನಗರದ ಜಿಪಂ ಜಲನಿರ್ಮಲ ಸಭಾಂಗಣದಲ್ಲಿ ಈ ಕುರಿತು ಸಭೆ ಆಯೋಜಿಸಿದ್ದು, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ ಸಾಲಪತ್ರ ಯೋಜನೆ ಬಿಡುಗಡೆಗೊಳಿಸುವರು ಎಂದು ಅಗ್ರಣಿ ಬ್ಯಾಂಕಿನ ಮುಖ್ಯವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement