ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ
ಲಿಂಗಸ್ಗೂರು: ಪಟ್ಟಣದ ಆದರ್ಶ ವಿದ್ಯಾಲಯದ 7, 8 ಮತ್ತು 9ನೇ ತರಗತಿಯಲ್ಲಿ ಖಾಲಿ ಇರುವ ವಿದ್ಯಾರ್ಥಿಗಳ ಸ್ಥಾನ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ 2010-11, 2011-12 ಮತ್ತು 2012-13ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯದ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮಾತ್ರ 2013-14 ನೇ ಸಾಲಿನ 7, 8 ಮತ್ತು 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಖಾಲಿ ಇರುವ ಸ್ಥಾನಗಳಿಗೆ ವರ್ಗವಾರು ಮೀಸಲಾತಿ ಅನ್ವಯವಾಗುತ್ತದೆ. ಅರ್ಜಿ ಸಲ್ಲಿಸಲು ಜೂ.13 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬೇಕು. ಅರ್ಜಿ ಸಲ್ಲಿಸುವವರು ಮುಖ್ಯೋಪಾಧ್ಯಾಯರು ಆದರ್ಶ ವಿದ್ಯಾಲಯ ಇವರಿಗೆ ಸಲ್ಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಮರಪ್ಪ ಭೋವಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.
ನಾಳೆ ಜನ್ಮದಿನೋತ್ಸವ
ರಾಯಚೂರು: ಪಂಡಿತ ತಾರಾನಾಥರ 122ನೇ ಜನ್ಮದಿನೋತ್ಸವವನ್ನು ಜೂ.6 ರಂದು ನಗರದ ಹಮ್ ದರ್ದ್ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10ಕ್ಕೆ ನಡೆಯುವ ಸಮಾರಂಭದಲ್ಲಿ ತಾರಾನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಾರಸಮಲ್ ಸುಖಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನಾಗರಾಜ್ ಮಸ್ಕಿ, ಡಾ. ಬಸಲಿಂಗ ಸೊಪ್ಪಿಮಠ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.