ಮಟಕಾ: ಇಬ್ಬರ ಬಂಧನ
ರಾಯಚೂರು: ಸಿಂಧನೂರು ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗೋಪಾಲಸಿಂಗ್ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ನಗದು ರು. 450 ಜಪ್ತಿ ಮಾಡಿದ್ದಾರೆ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.