ಮಟಕಾ; ವ್ಯಕ್ತಿ ಬಂಧನ
ರಾಯಚೂರು: ಸಿಂಧನೂರು ತಾಲೂಕಿನ ಹುಡಾ ಗ್ರಾಮದಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಅಮರೇಶ್ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ರು. 740 ಜಪ್ತಿ ಮಾಡಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.