ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

13ರಂದು ಪ್ರೊ. ಕೃಷ್ಣಪ್ಪ ಜನ್ಮದಿನ, ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ

Lingaraj Badiger
Updated On : 10 Jun 2013, 11:32 am

ಕನ್ನಡಪ್ರಭ ವಾರ್ತೆ, ರಾಯಚೂರು, ಜೂ.9
ಪ್ರೊ. ಬಿ.ಕೃಷ್ಣಪ್ಪ ಟ್ರಸ್ಟ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ವತಿಯಿಂದ ಜೂ. 13ರಂದು ಬೆಂಗಳೂರಿನಲ್ಲಿ ದಲಿತ ಚೇತನ ಪ್ರೊ. ಬಿ.ಕೃಷ್ಣಪ್ಪ ಅವರ 75ನೇ ಜಯಂತಿ, ವಿಚಾರ ಸಂಕಿರಣ ಹಾಗೂ ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ.
ನಗರದಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ನಾಗಣ್ಣ ಬಡಿಗೇರ್, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂದು ಬೆಳಗ್ಗೆ 11.30ಕ್ಕೆ ನಡೆಯುವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆಂದು ತಿಳಿಸಿದರು.
ಪುಸ್ತಕ ಬಿಡುಗಡೆ: ಸಮಾರಂಭದಲ್ಲಿ ಕಂದಾಯ ಸಚಿವ ಶ್ರೀನಿವಾಸ ಪ್ರಸಾದ್ ಪುಸ್ತಕ ಬಿಡುಗಡೆಗೊಳಿಸುವರು. ಅಧ್ಯಕ್ಷತೆಯನ್ನು ಇಂದಿರಾ ಕೃಷ್ಣಪ್ಪ ವಹಿಸಲಿದ್ದಾರೆ. ಕೃತಿಗಳ ಪರಿಚಯವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಸಿದ್ದರಾಮಯ್ಯ ಮಾಡಿಕೊಡಲಿದ್ದಾರೆ ಎಂದರು.
ಅದೇ ದಿನ ಮಧ್ಯಾಹ್ನ 2ಕ್ಕೆ ನಡೆಯುವ ವಿಚಾರ ಗೋಷ್ಠಿಯಲ್ಲಿ ಶಕ್ತಿ ರಾಜಕಾರಣ ಮತ್ತು ಸಾಮಾಜಿಕ ಸಬಲೀಕರಣ ಎಂಬ ವಿಷಯದ ಬಗ್ಗೆ ಬೆಂಗಳೂರು ವಿವಿ ಉಪನ್ಯಾಸಕ ಡಾ. ಕೇಶವ್ ವಿಷಯ ಮಂಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ವಹಿಸುವರು ಎಂದು ಹೇಳಿದರು.
ರಾಜ್ಯದ ವಿವಿಧೆಡೆಯಿಂದ ಆಗಮಿಸುವ ನೂರಾರು ಸಂಖ್ಯೆಯ ದಲಿತ ಸಂಘಟನೆಯ ಕಾರ್ಯಕರ್ತರು ಹಾಗೂ ಜನತೆ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು. ಈ ವೇಳೆ ಸಂಘಟನೆಯ ಜಿಲ್ಲಾ ಪ್ರಧಾನ ಸಂಚಾಲಕ ದುರುಗಪ್ಪ ಮ್ಯಾಗಳಮನಿ, ರಾಜ್ಯ ಸಮಿತಿ ಸದಸ್ಯ ಕುಪ್ಪಣ್ಣ ಹೊಸಮನಿ, ಜಿಲ್ಲಾ ಸಂಘಟನಾ ಸಂಚಾಲಕ ಚಿನ್ನಪ್ಪ ಯಡಗಿಬಾಳ, ರಂಗನಾಥ ಕೊರ್ತಕುಂದಾ, ಮರಿಯಣ್ಣ ಸಿರವಾರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement