ಇಂದು ತಾಪಂ ಸಾಮಾನ್ಯ ಸಭೆ
ಸಿಂಧನೂರು: ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಜೂ.12 ರಂದು ಬೆಳಗ್ಗೆ 11 ಗಂಟೆಗೆ ಕರೆಯಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ತಳವಾರ ತಿಳಿಸಿದ್ದಾರೆ. ತಾಪಂ ಅಧ್ಯಕ್ಷೆ ಬಸಮ್ಮ ಕೊಟ್ರೇಶ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದ್ದು ಸಭೆಯಲ್ಲಿ ಕುಡಿಯುವ ನೀರು, 2013- 14ನೇ ಸಾಲಿನ ವಿವಿಧ ಕ್ರಿಯಾ ಯೋಜನೆ ತಯಾರಿಸುವ, ವಿವಿಧ ಇಲಾಖೆಗಳ ಕ್ರಿಯಾಯೋಜನೆಗಳ ಅನುಮೋದನೆ, ಬೀಜ ವಿತರಣೆ, ರಾಸಾಯನಿಕ ಗೊಬ್ಬರಗಳ ವಿತರಣೆ ಸೇರಿದಂತೆ ಅಧ್ಯಕ್ಷರ ಅಪ್ಪಣೆ ಮೇರೆಗೆ ಇನ್ನಿತರ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಸಭೆಗೆ ಸರ್ವ ಸದಸ್ಯರು ಪಾಲ್ಗೊಳ್ಳಬೇಕು ಎಂದು ವಿನಂತಿಸಿದ್ದಾರೆ.