ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಇಂದು ಪ್ರಶಸ್ತಿ ಪ್ರದಾನ, ಸನ್ಮಾನ

Lingaraj Badiger
Updated On : 13 Jun 2013, 10:53 am

ರಾಯಚೂರು: ನಗರದ ರಂಗಮಂದಿರದಲ್ಲಿ ಜೂ.13ರಂದು ಚೆನ್ನಬಸವಪ್ಪ ಬೆಟ್ಟದೂರು ಅವರ ಐದನೇ ಪುಣ್ಯಸ್ಮರಣೆ, ಬರಹಗಾರರಿಗೆ ಪ್ರಶಸ್ತಿ ಪ್ರದಾನ ಮತ್ತು ನೂತನ ಶಾಸಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಅಮರಮ್ಮ ಚೆನ್ನಬಸವಪ್ಪ ಬೆಟ್ಟದೂರು ಪ್ರತಿಷ್ಠಾನದಿಂದ ಆಯೋಜಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳದ ಬರಹಗಾರ ಎಚ್.ಎಸ್. ಪಾಟೀಲ್ ವಹಿಸುವರು. ಅತಿಥಿಗಳಾಗಿ ಖ್ಯಾತ ಲೇಖಕ ದೇವನೂರು ಮಹಾದೇವ, ರೈತ ಸಂಘದ ಮುಖಂಡ ಹಾಗೂ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ, ಶಾಸಕ ಡಾ. ಶಿವರಾಜ್ ಪಾಟೀಲ್, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಡಾ. ಮಲ್ಲಿಕಾ ಘಂಟಿ, ಡಾ. ಜಿ.ಎನ್. ಉಪಾಧ್ಯ, ಅಬ್ಬಾಸ್ ಅಲಿ ಮೇಲಿನಮನಿ ಅವರಿಗೆ ಬರಹಗಾರರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅದೇ ರೀತಿ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಸನ್ಮಾನಿಸಲಾಗುತ್ತದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಗ್ರಾಪಂ ಸಭೆಗೆ ಸದಸ್ಯರ ಆಗ್ರಹ
ದೇವದುರ್ಗ: ತಾಲೂಕಿನ ಜಾಲಹಳ್ಳಿ ಗ್ರಾಪಂ ಸಾಮಾನ್ಯ ಸಭೆ ಕರೆಯುವಂತೆ ಗ್ರಾಪಂ ಸದಸ್ಯ ತಿಪ್ಪಯ್ಯ ನಾಯಕ ಒತ್ತಾಯಿಸಿದ್ದಾರೆ. ಈ ಕುರಿತು ತಾಪಂ ಇಒ.ಗೆ ಪತ್ರ ಬರೆದು, ಜಾಲಹಳ್ಳಿ ಗ್ರಾಪಂ.ನಲ್ಲಿ ಕಳೆದ 6 ತಿಂಗಳಿಂದ ಸಾಮಾನ್ಯ ಸಭೆ ನಡೆಸಿಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಸಮಸ್ಯೆಗಳಿದ್ದು ಅವುಗಳನ್ನು ಬಗೆಹರಿಸಲು ಪಿಡಿಒ ನೇಮಕವಾಗಬೇಕಿದೆ. ಈ ಹಿಂದೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನವಾಗಿಲ್ಲ ಎಂದು ದೂರಿದ್ದಾರೆ. ಗ್ರಾಪಂ ಕಟ್ಟಡದ ನಿರ್ಮಾಣ ಅರ್ಧಕ್ಕೆ ಸ್ಥಗಿತಗೊಂಡಿದೆ. ಸಂತೆ ಹರಾಜು ಸೇರಿ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಕೂಡಲೇ ಗ್ರಾಪಂ ಸಭೆ ಕರೆಯುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement