ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಡದಂಡೆ ಆಧುನೀಕರಣ ಕಾಮಗಾರಿ ವೀಕ್ಷಣೆ

Lingaraj Badiger
Updated On : 14 Jun 2013, 10:53 am

ರಾಯಚೂರು: ರಾಜ್ಯ ರೈತ ಸಂಘದ ಮುಖಂಡ ಹಾಗೂ ಮೇಲುಕೋಟೆ ಕ್ಷೇತ್ರದ ಶಾಸಕ ಪುಟ್ಟಣ್ಣಯ್ಯ ಅವರು ಗುರುವಾರ ಇಲ್ಲಿಗೆ ಸಮೀಪದ 7ನೇ ಮೈಲ್ ಕ್ರಾಸ್ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯ ಆಧುನೀಕರಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಾಲುವೆಯ ಒಳಮೈ ಬಲಪಡಿಸುವಿಕೆ ಸೇರಿದಂತೆ ವಿವಿಧ ಕಾಮಗಾರಿಗಳ ಬಗ್ಗೆ ನೀರಾವರಿ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕಾಮಗಾರಿಯ ಗುಣಮಟ್ಟದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿ ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುತ್ತದೆ ಎಂದು ಎಚ್ಚರಿಸಿದರು.
ಕೋಟ್ಯಂತರ ರು. ವೆಚ್ಚದಲ್ಲಿ ಕೈಗೊಳ್ಳುತ್ತಿರುವ ಕಾಮಗಾರಿಯ ನಿರ್ವಹಣೆಯಲ್ಲಿ ನೀರಾವರಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಗುತ್ತಿಗೆದಾರರು ನಿರ್ಲಕ್ಷ್ಯ ತೋರಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ವಿಷಯವನ್ನು ವಿಧಾನಸಭೆ ಕಲಾಪದಲ್ಲಿ ಮಂಡಿಸಿ ಸಮಗ್ರ ಚರ್ಚೆಗೆ ಒತ್ತಾಯಿಸುವುದಾಗಿ ಸುದ್ದಿಗಾರರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ ಮತ್ತಿತರರು ಹಾಜರಿದ್ದು ಪರಿಶೀಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement