ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕಾನೂನು ಚೌಕಟ್ಟಿನಲ್ಲೇ ಬದುಕಿ: ನ್ಯಾ. ಶಶಿಧರ

Lingaraj Badiger
Updated On : 17 Jun 2013, 11:03 am

ಸಿಂಧನೂರು: ಕಾನೂನು ಎಲ್ಲರಿಗೂ ಒಂದೇ. ಬಡವರು, ಶ್ರೀಮಂತರು ಎಂಬ ಭೇದ ಕಾನೂನಿಗಿಲ್ಲ. ಎಲ್ಲರೂ ಕಾನೂನಿನ ಚೌಕಟ್ಟಿನಲ್ಲೆ ಬದುಕಬೇಕು ಎಂದು ನ್ಯಾ. ಆರ್.ವೈ. ಶಶಿಧರ ಹೇಳಿದರು.
ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಸಮಾಜದಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕಬಹುದು. ಬಡವರು, ಪ.ಜಾತಿ- ಪಂಗಡ, ಹಿಂದುಳಿದವರು, ಮಹಿಳೆಯರು, ಮತ್ತಿತರಿಗೆ ಉಚಿತ ಕಾನೂನು ಸೇವೆ ಒದಗಿಸುವ ಉದ್ದೇಶದಿಂದ ಕಾನೂನು ಸೇವಾ ಸಮಿತಿಗಳು ದೇಶದ ಎಲ್ಲಾ ತಾಲೂಕು, ಜಿಲ್ಲೆ, ರಾಜ್ಯಗಳಲ್ಲಿ ಕೆಲಸ ಮಾಡುತ್ತಿವೆ. ದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿಯೂ ಉಚಿತ ಕಾನೂನು ಸೇವೆ ದೊರಕುತ್ತದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಸಮಾಜ ತಿದ್ದುವ ಕೆಲಸ ಮಾಡಿ: ಮುಖ್ಯ ಅತಿಥಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ಭಾರತಿ ರಾಯಣ್ಣವರ್ ಮಾತನಾಡಿದರು.
ಕಾರ್ಯಕ್ರಮವನ್ನುದ್ದೇಶಿಸಿ ಸರ್ಕಾರಿ ಸಹಾಯಕ ಅಭಿಯೋಜಕ ಶೇಖರಪ್ಪ ಶಾಲಿಗನೂರ, ಶಿಕ್ಷಕರ ತರಬೇತಿ ಸಂಸ್ಥೆಯ ಅಧೀಕ್ಷಕಿ ಸುಜಾತ ಹೂನೂರು, ಪ್ರ. ಶಿಕ್ಷಕಿ ರಮಾದೇವಿ ಶಂಭೋಜಿ ಮಾತನಾಡಿದರು. ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಕೆ. ಭೀಮನಗೌಡ ವಹಿಸಿದ್ದರು. ಪ್ರ. ಶಿಕ್ಷಕ ಬೀರಪ್ಪ ಶಂಭೋಜಿ ಸ್ವಾಗತಿಸಿದರು. ಎಚ್. ವೀರಭದ್ರಪ್ಪ ವಕೀಲರು ನಿರೂಪಿಸಿದರು. ಪ್ರ. ಶಿಕ್ಷಕ ಸಂಗಯ್ಯ ಸ್ವಾಮಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement