ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕುಡಿವ ನೀರೊದಗಿಸಲು ಶಾಸಕರ ಸೂಚನೆ

Lingaraj Badiger
Updated On : 17 Jun 2013, 11:03 am

ದೇವದುರ್ಗ: ತಾಲೂಕಿನ ಜಾಲಹಳ್ಳಿ ಗ್ರಾಮಕ್ಕೆ ಕೃಷ್ಣಾ ನದಿಯಿಂದ ನೀರೊದಗಿಸುವ ನಿಟ್ಟಿನಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗೆ ಚಾಲನೆ ನೀಡಿ ಸಮರ್ಪಕ ನೀರೊದಗಿಸುವಂತೆ ಶಾಸಕ ವೆಂಕಟೇಶ ನಾಯಕ ಅಧಿಕಾರಿಗಳಿಗೆ ಆದೇಶಿಸಿದರು. ಅವರು ಈಚೇಗೆ ಪಟ್ಟಣದ ಶಾಸಕರ ಭವನದಲ್ಲಿ ಕರೆದಿದ್ದ ಜಿಪಂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಜಾಲಹಳ್ಳಿ ಮತ್ತು ಲಿಂಗದಹಳ್ಳಿ ಗ್ರಾಮದ ಜನರಿಗೆ ಕುಡಿಯುವ ನೀರಿನ ತೊಂದರೆಯಿದೆ. ತಾಲೂಕಿನ ಗೋಪಾಳಪುರ, ಇಂಗಳದಾಳ, ಕಾಕರಗಲ್ ಸೇರಿ ವಿವಿಧೆಡೆ ಬಾಕಿಯಿರುವ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೂಡಲೇ ಪೂರ್ಣಗೊಳಿಸಿ ಚಾಲನೆ ನೀಡುವಂತೆ ಸೂಚಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸ್ಸಯ್ಯ ಶಾಖೆ, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ್, ಬುಡ್ಡನಗೌಡ ಜಾಗಟಗಲ್, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಮೂಡ್ಲಗುಂಡ, ಹುಸೇನಸಾಬ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement