ಮಲೇರಿಯಾ: ಜಾಗೃತಿ ಕಾರ್ಯಕ್ರಮ ಯಶಸ್ವಿ
ರಾಯಚೂರು: ತಾಲೂಕಿನ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ತುರುಕನಡೋಣಿ ಉಪಕೇಂದ್ರದಲ್ಲಿ ಜೂ. 30ರವರೆಗೆ ಆಯೋಜಿಸಿರುವ ಮಲೇರಿಯಾ ಮಾಸಾಚರಣೆ ಅಂಗವಾಗಿ ಜೂ.12ರಂದು ಮಲೇರಿಯಾ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ಇಲಾಖೆಯ ಸಿಬ್ಬಂದಿ ತಿಪ್ಪಣ್ಣ ಮಾತನಾಡಿ, ಗ್ರಾಮದ ಜನರಿಗೆ ಮಲೇರಿಯಾ ರೋಗದ ಲಕ್ಷಣಗಳು ಮತ್ತು ಚಿಕಿತ್ಸೆ ಬಗ್ಗೆ ತಿಳಿಸಿ, ಜ್ವರವು ಮಲೇರಿಯಾ ಆಗಿರುವ ಸಾಧ್ಯತೆಯಿರುತ್ತದೆ. ರಕ್ತಪರೀಕ್ಷೆ ಮೂಲಕ ರೋಗ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಮನವಿ ಮಾಡಿದರು.
ಇಂದು ಜಾಥಾ
ರಾಯಚೂರು: ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜೂ.17ರಂದು ನಗರದಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಾಥಾ ಹೊರಡಲಿದ್ದು, ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಲಿದೆ. ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಮುಕ್ತಾಯಗೊಳ್ಳಲಿದೆ. ಜಾಥಾಕ್ಕೆ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು, ಜಿಪಂ ಸಿಇಒ ಜ್ಞಾನಪ್ರಕಾಶ್ ಚಾಲನೆ ನೀಡಲಿದ್ದಾರೆಂದು ತಿಳಿಸಿದೆ.